ಬೆಳಕಿನ ಹಬ್ಬಕ್ಕೆ ಸಿಎಂ ಸಿದ್ದರಾಮಯ್ಯ ಶುಭಾಶಯ: ಹಸಿರು ಪಟಾಕಿಯನ್ನಷ್ಟೇ ಸಿಡಿಸುವಂತೆ ಮನವಿ
🎬 Watch Now: Feature Video
ಬೆಂಗಳೂರು: ನಾಡಿನಾದ್ಯಂತ ಬೆಳಕಿನ ಹಬ್ಬದ ಸಂಭ್ರಮ ಮನೆ ಮಾಡಿದೆ. ಸಿಎಂ ಸಿದ್ದರಾಮಯ್ಯ ಅವರು ದೀಪಾವಳಿ ಹಬ್ಬದ ಪ್ರಯುಕ್ತ ನಾಡಿನ ಜನತೆಗೆ ಶುಭ ಕೋರಿದ್ದಾರೆ. ವಿಡಿಯೋ ಸಂದೇಶದ ಮೂಲಕ ಸರ್ವರಿಗೂ ಶುಭ ಕೋರಿ, ಹಸಿರು ಪಟಾಕಿಯನ್ನಷ್ಟೇ ಸಿಡಿಸುವಂತೆ ಮನವಿ ಮಾಡಿದ್ದಾರೆ.
ದೀಪಾವಳಿ ಸರ್ವರೂ ಕೂಡಿ ಸಂಭ್ರಮಿಸುವ ಹಬ್ಬ. ಅಜ್ಞಾನದ ಅಂಧಕಾರವನ್ನು ಹೋಗಲಾಡಿಸಿ, ಜ್ಞಾನದ ದೀಪ ಬೆಳಗುವ ಹಬ್ಬ. ಹಬ್ಬದ ಸಂಭ್ರಮವು ನಮ್ಮ ಮೈ ಮರೆವಿನ ನಿರ್ಲಕ್ಷ್ಯದಿಂದ ಸಂಭವಿಸುವ ಅವಘಡಗಳಿಂದ ಮಂಕಾಗದಂತೆ ಎಚ್ಚರಿಕೆ ವಹಿಸೋಣ ಎಂದು ಸಿಎಂ ಕರೆ ನೀಡಿದ್ದಾರೆ.
ಪಟಾಕಿ ವಿಚಾರದಲ್ಲಿ ಹಿರಿ ಕಿರಿಯರೆಲ್ಲರೂ ಮುನ್ನಚ್ಚರಿಕೆ ವಹಿಸಬೇಕು. ಪಟಾಕಿಗಳಿಂದ ಉಂಟಾಗುವ ಶಬ್ದ ಮಾಲಿನ್ಯ, ಪರಿಸರ ಮಾಲಿನ್ಯ ಹಾಗೂ ಅಗ್ನಿ ಅವಘಢ ತಪ್ಪಿಸಲು ಹಸಿರು ಪಟಾಕಿಗೆ ಮಾತ್ರ ಅನುಮತಿ ನೀಡಲಾಗಿದೆ. ದೀಪಾವಳಿ ಹಬ್ಬದ ಹೆಸರಿನಲ್ಲಿ ಸಿಡಿಸುವ ಪಟಾಕಿಯ ರಾಸಾಯನಿಕಗಳು ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ವಿಶೇಷವಾಗಿ ಉಸಿರಾಟದ ಸಮಸ್ಯೆ ಇರುವವರು, ಶ್ವಾಸಕೋಶ, ಹೃದಯ ಸಂಬಂಧಿ ಖಾಯಿಲೆ ಇರುವವರಿಗೆ ಪಟಾಕಿಗಳಿಂದ ಉಂಟಾಗುವ ವಾಯು ಮಾಲಿನ್ಯ ಹಾಗೂ ಶಬ್ದ ಮಾಲಿನ್ಯ ಗಂಭೀರ ತೊಂದರೆ ನೀಡುತ್ತದೆ. ಪ್ರಾಣಿ ಪಕ್ಷಗಳು ಇದರಿಂದ ಮೂಖ ವೇದನೆ ಅನುಭವಿಸುತ್ತವೆ. ಹಾಗಾಗಿ ನಾಗರಿಕರು ಪರಿಸರ ಸ್ನೇಹಿ ಹಸಿರು ಪಟಾಕಿಯನ್ನು ಮಾತ್ರ ಬಳಸಬೇಕು ಎಂದು ವಿನಂತಿಸಿಕೊಂಡಿದ್ದಾರೆ.
ಇದನ್ನೂ ಓದಿ: ದೀಪಾವಳಿ 2023: ರಾಧಿಕಾ ಪಂಡಿತ್ ಸೇರಿದಂತೆ ಸ್ಯಾಂಡಲ್ವುಡ್ ಸ್ಟಾರ್ಸ್ ಆಕರ್ಷಕ ಫೋಟೋಗಳು