ಇಂದಿನಿಂದ ನೀತಿ ಸಂಹಿತೆ ಜಾರಿ.. ಗಡಿಭಾಗದ ಚೆಕ್ ಪೋಸ್ಟ್ಗಳಲ್ಲಿ ಅಧಿಕಾರಿಗಳು ಅಲರ್ಟ್
🎬 Watch Now: Feature Video
ದೇವನಹಳ್ಳಿ: ಭಾರತದ ಚುನಾವಣಾ ಆಯೋಗವು ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕವನ್ನು ನಿಗದಿಪಡಿಸಿದ್ದು, ಇಂದಿನಿಂದ ನೀತಿ ಸಂಹಿತೆ ಜಾರಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಗಡಿಭಾಗದ ಚೆಕ್ ಪೋಸ್ಟ್ಗಳಲ್ಲಿ ಪೊಲೀಸರು ಫುಲ್ ಅಲರ್ಟ್ ಆಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 7ರ ವೆಂಕಟಗಿರಿಕೋಟೆ ಚೆಕ್ ಪೋಸ್ಟ್ನಲ್ಲಿ ಪೊಲೀಸರು ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಅಲರ್ಟ್ ಆಗಿ ಜಂಟಿ ಕಾರ್ಯಚರಣೆ ನಡೆಸುತ್ತಿದ್ದಾರೆ.
ಹೈದರಾಬಾದ್ನಿಂದ ಚಿಕ್ಕಬಳ್ಳಾಪುರ ಮೂಲಕ ಬೆಂಗಳೂರು ನಗರಕ್ಕೆ ಆಗಮಿಸುವ ವಾಹನಗಳನ್ನು ತೀವ್ರ ತಪಾಸಣೆಗೆ ಒಳಪಡಿಸಿದ್ದಾರೆ. ಹೆದ್ದಾರಿಯಲ್ಲಿ ಬ್ಯಾರಿಕೇಡ್ ಅಳವಡಿಸಿ ಹೆದ್ದಾರಿಯಲ್ಲಿ ಸಂಚರಿಸುವ ಎಲ್ಲಾ ವಾಹನಗಳನ್ನ ತೀವ್ರ ತಪಾಸಣೆಗೆ ಅಧಿಕಾರಿಗಳು ಒಳಪಡಿಸುತ್ತಿದ್ದಾರೆ. ಪೊಲೀಸರು ಮತ್ತು ಕಂದಾಯ ಇಲಾಖೆ ಅಧಿಕಾರಿಗಳಿಂದ ಜಂಟಿ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಚುನಾವಣಾ ಅಕ್ರಮದ ಬಗ್ಗೆ ಹದ್ದಿನ ಕಣ್ಣಿಡಲಾಗಿದೆ.
ನೀತಿ ಸಂಹಿತೆ ಎಂದರೇನು: ನೀತಿ ಸಂಹಿತೆಯು ಮುಕ್ತ ಮತ್ತು ನ್ಯಾಯಸಮ್ಮತವಾದ ಚುನಾವಣಾ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ಚುನಾವಣಾ ಆಯೋಗವು ಸೂಚಿಸಿದ ನಿಯಮಗಳ ಪಟ್ಟಿಯಾಗಿದೆ. ಈ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ ಮಾಡಿದಲ್ಲಿ ಮತದಾನ ಪ್ರಕ್ರಿಯೆಯನ್ನು ಮೇಲ್ವಿಚಾರಣೆ ಮಾಡುವ ಚುನಾವಣಾ ಆಯೋಗದಿಂದ ಕಠಿಣ ಶಿಕ್ಷೆಗೆ ಗುರಿಯಾಗುವ ಸಾಧ್ಯತೆಯಿರುತ್ತದೆ.
ಇದನ್ನೂ ಓದಿ: ಬಳ್ಳಾರಿ ಮಹಾನಗರ ಪಾಲಿಕೆಗೆ ನೂತನ ಸಾರಥಿ.. 23ನೇ ವಯಸ್ಸಿಗೇ ಮೇಯರ್ ಪಟ್ಟ ಅಲಂಕರಿಸಿದ ತ್ರಿವೇಣಿ