ಸುವರ್ಣ ವಿಧಾನಸೌಧಕ್ಕೆ ಕಲರ್ ಫುಲ್​ ಲೈಟಿಂಗ್; ಸಿಎಂ ಸಿದ್ದರಾಮಯ್ಯ ಉದ್ಘಾಟನೆ- ವಿಡಿಯೋ - ​ ETV Bharat Karnataka

🎬 Watch Now: Feature Video

thumbnail

By ETV Bharat Karnataka Team

Published : Dec 4, 2023, 10:58 PM IST

ಬೆಳಗಾವಿ : ಇಲ್ಲಿನ ಸುವರ್ಣಸೌಧಕ್ಕೆ ಶಾಶ್ವತ ವಿದ್ಯುತ್ ಅಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ವಿಧಾನಸಭಾಧ್ಯಕ್ಷರಾದ ಯು.ಟಿ ಖಾದರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ಸಮಾಜ ಕಲ್ಯಾಣ ಸಚಿವ ಹೆಚ್.ಸಿ ಮಹದೇವಪ್ಪ ಸೇರಿದಂತೆ ಹಲವು ಸಚಿವರು ಮತ್ತು ಶಾಸಕರು ಈ ಸಂದರ್ಭಕ್ಕೆ ಸಾಕ್ಷಿಯಾದರು.

ನಾಡಿಗೆ ಕರ್ನಾಟಕ ಎಂದು ನಾಮಕರಣಗೊಂಡು 50 ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಸುವರ್ಣ ಸಂಭ್ರಮದ ಪ್ರಯುಕ್ತ ಬೆಳಗಾವಿಯ ಸುವರ್ಣ ವಿಧಾನ ಸೌಧದ ಕಟ್ಟಡಕ್ಕೆ ವಿಶೇಷ ವಿನ್ಯಾಸವುಳ್ಳ ಶಾಶ್ವತ ಬಣ್ಣ ಬಣ್ಣದ ದೀಪಾಲಂಕಾರ ಮಾಡಲಾಗಿದೆ. ಪ್ರತಿ ಶನಿವಾರ, ಭಾನುವಾರ ಹಾಗೂ ಹಬ್ಬಗಳಂದು, ವಿಶೇಷ ದಿನಗಳು, ಸರ್ಕಾರಿ ರಜಾ ದಿನಗಳಂದು ವಿದ್ಯುತ್ ದೀಪ ಬೆಳಗಲಿದ್ದು, ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಹಿನ್ನೆಲೆಯಲ್ಲಿ ಈ ವ್ಯವಸ್ಥೆ ಮಾಡಲಾಗಿದೆ.

ಬಣ್ಣದ ಬಣ್ಣದ ದೀಪಾಲಂಕಾರದ ಸೊಬಗು ನೆರೆದಿದ್ದವರ ಮನಸೂರೆಗೊಂಡಿತು. ತ್ರಿವರ್ಣ ಬಣ್ಣದೊಂದಿಗೆ ಎಲ್​ಇಡಿ ದೀಪವನ್ನು ಸುವರ್ಣಸೌಧದ ಮೇಲೆ ಹರಿಬಿಡುವ ಮೂಲಕ ಸುವರ್ಣಸೌಧಕ್ಕೆ ವಿಶೇಷ ಕಳೆ ಬಂದಿದೆ. 

ಇದನ್ನೂ ಓದಿ : ವಿವಿಧ ಬೇಡಿಕೆ ಈಡೇರಿಸುವಂತೆ ಮನವಿ; ಯರಗಟ್ಟಿ ರೈತರಿಂದ ಸಿಎಂಗೆ ನೇಗಿಲು ಗಿಫ್ಟ್

ABOUT THE AUTHOR

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.