ಎಐಸಿಸಿ ಅಧ್ಯಕ್ಷರಾಗಿ ಖರ್ಗೆ ಪದಗ್ರಹಣ: ತವರು ಜಿಲ್ಲೆ ಕಲಬುರಗಿಯಲ್ಲಿ ಕಾರ್ಯಕರ್ತರ ಸಂಭ್ರಮ - Sardar Vallabhbhai Patel

🎬 Watch Now: Feature Video

thumbnail

By

Published : Oct 26, 2022, 5:43 PM IST

Updated : Feb 3, 2023, 8:30 PM IST

ದೇಶದ ಅತಿದೊಡ್ಡ ಪಕ್ಷವಾದ ಎಐಸಿಸಿ ನೂತನ ಅಧ್ಯಕ್ಷರಾಗಿ ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕರಿಸುತ್ತಿದ್ದಂತೆ ಇತ್ತ ಅವರ ತವರು ಜಿಲ್ಲೆ ಕಲಬುರಗಿಯಲ್ಲಿ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದೆ. ನಗರದ ಸರ್ದಾರ್​ ವಲ್ಲಭಬಾಯಿ ಪಟೇಲ್ ವೃತ್ತದಲ್ಲಿ ಬೃಹತ್ ಗಾತ್ರದ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿದರು. ಅಲ್ಲದೆ, ಪಟಾಕಿ ಸಿಡಿಸಿ ಪರಸ್ಪರ ಸಿಹಿ ಹಂಚಿಕೊಂಡು ಕಾರ್ಯಕರ್ತರು ಸಂಭ್ರಮಿಸಿದ್ದಾರೆ. ಈ ವೇಳೆ ಅಪಾರ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು ಖರ್ಗೆ ಪರವಾಗಿ ಘೋಷಣೆ ಕೂಗಿದರು. ಖರ್ಗೆ ಅವರ ಸ್ವಾಭಿಮಾನಕ್ಕೆ ಸಿಕ್ಕ ಜಯ ಇದಾಗಿದೆ. ತಮಗೆ ಸಿಕ್ಕ ಮಹತ್ತರವಾದ ಜವಾಬ್ದಾರಿಯನ್ನು ಯಶಸ್ವಿಯಾಗಿ ನಡೆಸಿಕೊಂಡು ಹೋಗಲಿದ್ದಾರೆ ಎಂಬ ವಿಶ್ವಾಸವನ್ನು ಕಾರ್ಯಕರ್ತರು ವ್ಯಕ್ತಪಡಿಸಿದರು.
Last Updated : Feb 3, 2023, 8:30 PM IST

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.