ಸಿದ್ದರಾಮಯ್ಯ ತಂಗಿದ್ದ ಹೋಟೆಲ್ ಮುಂದೆ ಕೈ ಕಾರ್ಯಕರ್ತರ ಪ್ರತಿಭಟನೆ- ವಿಡಿಯೋ - congress activists protest

🎬 Watch Now: Feature Video

thumbnail

By

Published : Mar 2, 2023, 8:37 AM IST

ಬೆಳಗಾವಿ: ರಾಮದುರ್ಗ ವಿಧಾನಸಭಾ ಕ್ಷೇತ್ರದ ಬಿ ಫಾರಂ ಅನ್ನು ಚಿಕ್ಕರೇವಣ್ಣರಿಗೆ ನೀಡುವಂತೆ ಒತ್ತಾಯಿಸಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಂಗಿದ್ದ ಹೋಟೆಲ್ ಮುಂಭಾಗ ತಡರಾತ್ರಿ ಪ್ರತಿಭಟನೆ ನಡೆಸಲಾಯಿತು. ಈ ವೇಳೆ, ಅಶೋಕ್ ಪಟ್ಟಣಗೆ ಟಿಕೆಟ್ ನೀಡಬಾರದು, ರಾಮದುರ್ಗ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಚಿಕ್ಕರೇವಣ್ಣಗೆ ನೀಡಬೇಕು ಎಂದು ಘೋಷಣೆಗಳನ್ನು ಕೂಗಿದರು.

ಚಿಕ್ಕರೇವಣ್ಣ ರಾಮದುರ್ಗ ವಿಧಾನಸಭಾ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದು, ಕಳೆದ ಸಾರ್ವತ್ರಿಕ ಚುನಾವಣೆಯಿಂದ ಟಿಕೆಟ್ ಕೇಳುತ್ತಿದ್ದಾರೆ. ರಾಮದುರ್ಗದಿಂದ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದ್ದು, ಹೈಕಮಾಂಡ್​ಗೆ ತಲೆನೋವಾಗಿ ಪರಿಣಮಿಸಿದೆ.  

ಇದನ್ನೂ ಓದಿ: ಸರ್ಕಾರಿ ನೌಕರರ ಮೂಗಿಗೆ ತುಪ್ಪ ಹಚ್ಚುವ ಕೆಲಸ ಮಾಡಲಾಗುತ್ತಿದೆ: ಸಿದ್ದರಾಮಯ್ಯ ವಾಗ್ದಾಳಿ

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.