ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಪಟಾಕಿ ಸಿಡಿಸಿ ಸಂಭ್ರಮ: ವಿಡಿಯೋ

By

Published : May 13, 2023, 11:45 AM IST

Updated : May 13, 2023, 2:31 PM IST

thumbnail

ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆಯ ನಡುವೆಯೇ ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಸಂಭ್ರಮಾಚರಣೆ ನಡೆದಿದೆ. ಗೆಲುವಿನ ನಿರೀಕ್ಷೆಯಲ್ಲಿ ಪಕ್ಷದ ಕಚೇರಿಯಲ್ಲಿ ಭಾಂಗ್ರಾ ನೃತ್ಯಗಾರರು ಪ್ರದರ್ಶನ ನೀಡುತ್ತಿರುವುದು ಕಂಡುಬಂದಿತು. ಆರಂಭಿಕ ಟ್ರೆಂಡ್‌ಗಳು ಕರ್ನಾಟಕದಲ್ಲಿ ಆಡಳಿತಾರೂಢ ಬಿಜೆಪಿಗಿಂತ ವಿರೋಧ ಪಕ್ಷ ಕಾಂಗ್ರೆಸ್​ ಮುನ್ನಡೆ ಸಾಧಿಸಿದೆ. ಹಾಗಾಗಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಡೋಲು ಬಾರಿಸಿ ಸಂಭ್ರಮಿಸಿದ್ದಾರೆ.

ಮೇ 10 ರಂದು ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯ 224 ಸ್ಥಾನಗಳಿಗೆ ಮತ ಎಣಿಕೆಗೆ ನಡೆಯುತ್ತಿದೆ. ಮೊದಲ ಹಂತದಲ್ಲಿ ಕಾಂಗ್ರೆಸ್​ 117 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಬಿಜೆಪಿ 69 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದುಕೊಂಡು ಎರಡನೇ ಸ್ಥಾನದಲ್ಲಿದೆ. ಪ್ರಾಂತ್ಯವಾರು ಫಲಿತಾಂಶದಲ್ಲೂ ಕಾಂಗ್ರೆಸ್​ ಪಕ್ಷ ಮುಂದಿದೆ. ಕಾಂಗ್ರೆಸ್ ಮುನ್ನಡೆ ಸಾಧಿಸಿರುವ ಹಿನ್ನೆಲೆ ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಸಂಭ್ರಮಾಚರಣೆ ನಡೆಯುತ್ತಿದೆ. ಇತ್ತ ಬೆಂಗಳೂರಿನ ಕಾಂಗ್ರೆಸ್‌ ಕಚೇರಿಯಲ್ಲೂ ಕಾರ್ಯಕರ್ತರು ಸಂಭ್ರಮಿಸುತ್ತಿದ್ದಾರೆ. ಕನಕಪುರದಲ್ಲಿ ಡಿ.ಕೆ.ಶಿವಕುಮಾರ್, ವರುಣಾದಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ಮುನ್ನಡೆ ಸಾಧಿಸಿದ್ದಾರೆ

ಇದನ್ನೂ ಓದಿ: ಶಿಮ್ಲಾದ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಿಯಾಂಕಾ ಗಾಂಧಿ- ವಿಡಿಯೋ

Last Updated : May 13, 2023, 2:31 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.