ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಕುರಿತ ಹೇಳಿಕೆ ವೈರಲ್: ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ - ಈಟಿವಿ ಭಾರತ ಕನ್ನಡ ನ್ಯೂಸ್
🎬 Watch Now: Feature Video
ಮಂಡ್ಯ : ಕಾಂಗ್ರೆಸ್ ಸರ್ಕಾರದ ಉಚಿತ ಗ್ಯಾರಂಟಿ ವಿಚಾರವಾಗಿ ನೀಡಿದ್ದರು ಎನ್ನಲಾದ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದ್ದಂತೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಜಿಲ್ಲೆಯ ನಾಗಮಂಗಲ ತಾಲೂಕಿನ ಇಜ್ಜಲಘಟ್ಟದಲ್ಲಿಂದು ಮಾತನಾಡಿದ ಅವರು, ನಾನು ಗಿಮಿಕ್ ಹೇಳಿಲ್ಲ. ಅದ್ಯಾಕೆ ಸುಮ್ನೆ ಏನೇನೋ ಮಾತನಾಡುತ್ತೀರಿ. ಬಿಜೆಪಿಯವರಿಗೆ ವೈರಲ್ ಅಲ್ದೇ ಇನ್ನೊಂದು ಮಾಡೋಕೆ ಹೇಳಿ? ಎಂದು ತಮ್ಮ ಹೇಳಿಕೆ ವೈರಲ್ ಆದ ಬಗ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.
ವೈರಲ್ ವಿಡಿಯೋದಲ್ಲಿ ಏನಿತ್ತು? : ಎನ್.ಚಲುವರಾಯಸ್ವಾಮಿ ಮಾತನಾಡಿದ್ದಾರೆ ಎನ್ನಲಾದ ವೈರಲ್ ವಿಡಿಯೋದಲ್ಲಿ, "ಮೊದಲಿಗೆ ಉಚಿತ ಯೋಜನೆಗಳನ್ನು ಘೋಷಿಸುವ ಬಗ್ಗೆ ದೇಶದಲ್ಲೆಲ್ಲ ಚರ್ಚೆಯಾಯಿತು, ಇದು ಒಳ್ಳೆಯದಲ್ಲ ಎಂದು ನಾವೂ ಕೂಡ ಚರ್ಚೆ ಮಾಡಿದೆವು. ಮುಂದೆ ಫ್ರೀ ಫ್ರೀ ಅಂತ ಹೋದರೆ ಇದು ಎಲ್ಲಿಗೆ ಹೋಗಿ ಮುಟ್ಟಬಹುದು ಅಂತ. ಈಗ ನಾವುಗಳೂ ಅದೇ ಲೈನ್‌ನಲ್ಲಿ ಹೊರಟಿದ್ದೇವೆ. ಎಲ್ಲೋ ಒಂದು ಕಡೆ ಚುನಾವಣೆ, ರಿಸಲ್ಟ್, ಸರ್ಕಾರ ಬಂದ್ರೆ ತಾನೇ ನಾವೇನಾದ್ರೂ ಮಾಡಲು ಸಾಧ್ಯ? ಅಧಿಕಾರ ಸಿಕ್ಕಿದರೆ ತಾನೇ ನಾವು ಕೆಲಸ ಮಾಡಲು ಸಾಧ್ಯ ಅನ್ನುವ ದೃಷ್ಟಿ ಬಂದಾಗ ಅವತ್ತಿಗೆ ರಿಸಲ್ಟ್ ಅನಿವಾರ್ಯ ಆಗುತ್ತದೆ. ರಿಸಲ್ಟ್ ಬರಬೇಕು ಎಂದಾಗ ಈ ರೀತಿಯ ಚೀಪ್ ಪಾಪ್ಯುಲಾರಿಟಿ, ಇಲ್ಲದ್ದು ಬಲ್ಲದ್ದು ಎಲ್ಲ ಮಾಡ್ತೀವಿ. ಬಟ್ ನಮ್ಮ ಮನಸ್ಸಿಗೆ ಇಷ್ಟ ಆಗ್ತದೋ ಇಲ್ಲವೋ, ಸಿದ್ದರಾಮಯ್ಯನವರ ಮನಸ್ಸಿಗೆ ಇಷ್ಟ ಆಗ್ತದೋ ಇಲ್ಲವೋ ಕೆಲವೊಂದನ್ನು ಮಾಡಿಕೊಂಡು ಹೋಗಬೇಕಾಗುತ್ತದೆ. ಕೆಲವನ್ನು ಅಕ್ಸೆಪ್ಟ್ ಮಾಡಬೇಕಾಗುತ್ತದೆ" ಎಂದು ಹೇಳಿದ್ದರು ಎನ್ನಲಾಗಿತ್ತು.
ಇದನ್ನೂ ಓದಿ : ಭಾಷಣಕ್ಕೆ ಅಡ್ಡಿಪಡಿಸಿದ ಕಾರ್ಯಕರ್ತನ ವಿರುದ್ಧ ಗರಂ ಆದ ಆಯನೂರು ಮಂಜುನಾಥ್