ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಪ್ರದರ್ಶಿಸಿದ ಡಿಕೆಶಿ - ಪ್ರತಿ ಮನೆ ಯಜಮಾನಿಗೆ 2000 ರೂ

🎬 Watch Now: Feature Video

thumbnail

By

Published : Feb 11, 2023, 5:34 PM IST

Updated : Feb 14, 2023, 11:34 AM IST

ಬೆಂಗಳೂರು: ಗೃಹಜ್ಯೋತಿ ಹಾಗೂ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಗ್ಯಾರಂಟಿ ಕೋಟಿ ಕಾರ್ಡ್​ಗಳನ್ನು  ಮನೆ ಮನೆ ತಲುಪಿಸಲು ಕಾಂಗ್ರೆಸ್ ಸಜ್ಜಾಗಿದೆ.
ಕೆಪಿಸಿಸಿ ಕಚೇರಿಯಲ್ಲಿ ಈ ಕಾರ್ಡ್ ಗಳನ್ನು ಮಾಧ್ಯಮದವರಿಗೆ ಶನಿವಾರ ಪ್ರದರ್ಶಿಸಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು , ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ  ಗೃಹಜ್ಯೋತಿ ಯೋಜನೆ ಮೂಲಕ 200 ಯುನಿಟ್ ವಿದ್ಯುತ್ ಉಚಿತ, ಗೃಹಲಕ್ಷ್ಮಿ ಯೋಜನೆ ಮೂಲಕ ಪ್ರತಿ ಮನೆ ಯಜಮಾನಿಗೆ 2000 ರೂ. ಪ್ರತಿ ತಿಂಗಳು ಕೊಡಲು ಪಕ್ಷ ತೀರ್ಮಾನಿಸಿದೆ ಎಂದರು.
ವರ್ಷಕ್ಕೆ ಒಟ್ಟು 42 ಸಾವಿರದಂತೆ 5 ವರ್ಷಕ್ಕೆ 2 ಲಕ್ಷವನ್ನು ಜನರಿಗೆ ನೀಡಲಾಗುವುದು. ನಾನು ಹಾಗೂ ಸಿದ್ದರಾಮಯ್ಯ ಸಹಿ ಹಾಕಿರೋ ಗ್ಯಾರಂಟಿ ಕಾರ್ಡ್ ಗಳನ್ನು  ಬ್ಲಾಕ್ ಕಾಂಗ್ರೆಸ್​ ಹಾಗೂ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಿ ಬೂತ್ ನ ಮನೆ ಮನೆಗೂ ಹಂಚಲಾಗುವುದು ಎಂದರು.

ಇದನ್ನೂಓದಿ:ಜಿಎಸ್​ಟಿ ಸಂಗ್ರಹದಲ್ಲಿ ಕರ್ನಾಟಕ ದಾಖಲೆ.. ಭಾರತ್ ಎಕ್ಸ್​ಪ್ರೆಸ್, ಮೈಸೂರು-ಬೆಂಗಳೂರು ದಶಪಥ ರಸ್ತೆಗೆ ಮೋದಿ ಮೆಚ್ಚುಗೆ

Last Updated : Feb 14, 2023, 11:34 AM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.