ಕರ್ನಾಟಕಕ್ಕೆ ಯಾರು ಸಿಎಂ? ದೆಹಲಿಯಲ್ಲಿ ರಾಹುಲ್ ಭೇಟಿಯಾದ ಸಿದ್ದರಾಮಯ್ಯ, ಡಿಕೆಶಿ - Siddaramaiah arrives Rahul Gandhi house
🎬 Watch Now: Feature Video
ನವದೆಹಲಿ: ಕರ್ನಾಟಕ ಸಿಎಂ ಸಸ್ಪೆನ್ಸ್ ಮುಂದುವರಿದಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಇಂದು ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದರು. ದೆಹಲಿಯ 10 ಜನಪತ್ನಲ್ಲಿರುವ ನಿವಾಸಕ್ಕೆ ಬೆಳಗ್ಗೆ ಆಗಮಿಸಿದ್ದ ಸಿಎಂ ಸ್ಥಾನದ ಪ್ರಬಲ ಆಕಾಂಕ್ಷಿಗಳ ಜೊತೆ ಅವರು ಮಾತುಕತೆ ನಡೆಸಿದರು.
ನಿನ್ನೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸುರ್ಜೇವಾಲಾ, ವೇಣುಗೋಪಾಲ್ ಅವರ ಜೊತೆಗೆ ನಡೆಸಿದ ಹಲವು ಸುತ್ತಿನ ಸಭೆಗಳ ಹೊರತಾಗಿಯೂ ಸಿಎಂ ಆಯ್ಕೆ ಕಗ್ಗಂಟು ಬಿಡಿಸಲಾಗಿಲ್ಲ.
ಸಿಎಂ ಸ್ಥಾನಕ್ಕಾಗಿ ಪಟ್ಟು ಹಿಡಿದಿರುವ ಸಿದ್ದರಾಮಯ್ಯ ಅವರ ಜೊತೆಗೆ ರಾಹುಲ್ ಗಾಂಧಿ ಅವರು ಮೊದಲು ಚರ್ಚೆ ನಡೆಸಿದರು. ಸಿದ್ದು ನಿವಾಸದಿಂದ ತೆರಳಿದ ಬಳಿಕ, ಡಿ.ಕೆ.ಶಿವಕುಮಾರ್ ಭೇಟಿ ನೀಡಿದರು. ಡಿಕೆಶಿ ಅವರ ಜೊತೆ ರಾಹುಲ್ ಗಾಂಧಿ ಅವರು ಚರ್ಚಿಸಿದ ಬಳಿಕ ಸಿಎಂ ಯಾರಾಗಲಿದ್ದಾರೆ ಎಂಬುದು ಗೊತ್ತಾಗಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಇದನ್ನೂ ಓದಿ: ಮುಖ್ಯಮಂತ್ರಿ ಆಯ್ಕೆ: ಒಳ್ಳೆಯ ನಿರ್ಧಾರ ಹೊರ ಬರಲಿದೆ- ಕೆ.ಸಿ.ವೇಣುಗೋಪಾಲ್