ಲೋಕಸಭೆ ಚುನಾವಣೆಗೆ ಇದು ಮೆಟ್ಟಿಲು, ರಾಹುಲ್ ಗಾಂಧಿ ಪ್ರಧಾನಿ ಆಗಲಿ: ಸಿದ್ದರಾಮಯ್ಯ - ಕರ್ನಾಟಕ ವಿಧಾನಸಭೆ ಫಲಿತಾಂಶ
🎬 Watch Now: Feature Video

ಬೆಂಗಳೂರು: ಈ ಬಾರಿ ಕಾಂಗ್ರೆಸ್ 130 ಸ್ಥಾನಗಳನ್ನು ದಾಟುತ್ತದೆ. ಇದು ಕಾಂಗ್ರೆಸ್ ಪಕ್ಷದ ದೊಡ್ಡ ಗೆಲುವು. ಬಿಜೆಪಿ ಸರ್ಕಾರದಿಂದ ಬೇಸತ್ತು ಕರ್ನಾಟಕದ ಜನರು ಬದಲಾವಣೆ ಬಯಸಿದ್ದಾರೆ. ‘ಕಮಲ’ ಆಪರೇಷನ್‌ಗೆ ಬಿಜೆಪಿ ಸಾಕಷ್ಟು ಹಣ ಖರ್ಚು ಮಾಡಿದೆ. ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಪಾದಯಾತ್ರೆ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಿಸಿತು. ಗೆಲುವಿಗೆ ಇದು ಪ್ರಮುಖ ಕಾರಣವಾಯಿತು ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಇದು ನರೇಂದ್ರ ಮೋದಿ, ಅಮಿತ್ ಶಾ ಮತ್ತು ಜೆಪಿ ನಡ್ಡಾ ವಿರುದ್ಧದ ಜನಾದೇಶ. ಪ್ರಧಾನಿ 20 ಬಾರಿ ಕರ್ನಾಟಕಕ್ಕೆ ಬಂದಿದ್ದರು. ಈ ಹಿಂದೆ ಯಾವ ಪ್ರಧಾನಿಯೂ ಈ ರೀತಿ ಪ್ರಚಾರ ಮಾಡಿಲ್ಲ. ಆದರೂ ಬಿಜೆಪಿಗೆ ಸೋಲಾಗಿದೆ ಎಂದು ಬಿಜೆಪಿ ಪ್ರಚಾರದ ಕುರಿತಾಗಿ ಸಿದ್ದರಾಮಯ್ಯ ಮಾತನಾಡಿದರು.
ಈ ಚುನಾವಣೆಯ ಫಲಿತಾಂಶ ಲೋಕಸಭೆ ಚುನಾವಣೆಗೆ ಮೆಟ್ಟಿಲು. ಎಲ್ಲ ಬಿಜೆಪಿಯೇತರ ಪಕ್ಷಗಳು ಒಗ್ಗೂಡಿ ಬಿಜೆಪಿಯನ್ನು ಸೋಲಿಸುವುದನ್ನು ನೋಡುತ್ತೇವೆ ಮತ್ತು ರಾಹುಲ್ ಗಾಂಧಿ ದೇಶದ ಪ್ರಧಾನಿಯಾಗಬಹುದು ಎಂದು ನಾನು ಭಾವಿಸುತ್ತೇನೆ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಇದನ್ನೂ ಓದಿ: ಕಾಂಗ್ರೆಸ್‌ಗೆ ಪ್ರಚಂಡ ಗೆಲುವು: ಡಿಕೆಶಿ ಭಾವುಕ ನುಡಿ- ವಿಡಿಯೋ