ಮಳೆಗಾಗಿ ಪ್ರಾರ್ಥಿಸಿ ಕುದ್ರೋಳಿ ಗೋಕರ್ಣನಿಗೆ ಕಾಂಗ್ರೆಸ್‌ನಿಂದ ಶತ ಸೀಯಾಳಾಭಿಷೇಕ - ಕುದ್ರೋಳಿ ಶ್ರೀಗೋಕರ್ಣನಾಥ
🎬 Watch Now: Feature Video
ಮಂಗಳೂರು: ಕರಾವಳಿಗೆ ಇನ್ನೂ ಮುಂಗಾರು ಪ್ರವೇಶವಾಗಿಲ್ಲ. ಇಂದು ಬಿಪೊರ್‌ಜಾಯ್ ಚಂಡಮಾರುತದ ಪ್ರಭಾವದಿಂದ ಮಳೆಯಾಗಿದ್ದು, ನಾಳೆ ಮುಂಗಾರು ಮಳೆ ಬೀಳುವ ನಿರೀಕ್ಷೆ ಇದೆ. ಇದರ ನಡುವೆ ಕಾಂಗ್ರೆಸ್ ಪಕ್ಷದಿಂದ ಕುದ್ರೋಳಿ ಶ್ರೀ ಗೋಕರ್ಣನಾಥನಿಗೆ ಮಳೆಗಾಗಿ ಪ್ರಾರ್ಥಿಸಿ ಶತ ಸೀಯಾಳಾಭಿಷೇಕ ನಡೆಯಿತು. ಸುಡುಬಿಸಿಲಿನಿಂದ ಜನರು ತತ್ತರಿಸುತ್ತಿದ್ದು ನದಿ, ತೊರೆಗಳು ಸಂಪೂರ್ಣ ಬತ್ತಿ ಹೋಗಿ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗುತ್ತಿದೆ. ಆದ್ದರಿಂದ ಶೀಘ್ರ ಮಳೆ ಸುರಿಯುವಂತೆ ಹಾಗೂ ಲೋಕಕಲ್ಯಾಣಾರ್ಥವಾಗಲಿ ಎಂದು ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ಮೊದಲಿಗೆ ದೇವರಿಗೆ ಅಲಂಕಾರ ಮಾಡಿ, ಬಳಿಕ ಕಲಶ ನೀರಿನ ಅಭಿಷೇಕ ನೆರವೇರಿತು. ಮಧ್ಯಾಹ್ನ 11:15ರ ವೇಳೆಗೆ ದೇವಳದ ಅರ್ಚಕರಿಂದ ಗೋಕರ್ಣನಾಥ ದೇವರಿಗೆ ಶತಸೀಯಾಳಭಿಷೇಕ ಆರಂಭಗೊಂಡಿತು. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್, ಕುದ್ರೋಳಿ ಕ್ಷೇತ್ರದ ಅಧ್ಯಕ್ಷ ಸಾಯಿರಾಂ ಆರ್, ಕಾಂಗ್ರೆಸ್‌ನ ಹಿರಿಯ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು, ಕ್ಷೇತ್ರದ ಭಕ್ತರು ಇದ್ದರು.
ಇದನ್ನೂ ಓದಿ: ಕಾಫಿನಾಡಿನ ಗಿರಿ ಭಾಗದ ಪ್ರವಾಸಿ ತಾಣಗಳಲ್ಲಿಲ್ಲ ಮೂಲಭೂತ ಸೌಲಭ್ಯ: ರಾಷ್ಟ್ರಪತಿಗೆ ಪತ್ರ ಬರೆದ ಮಹಿಳೆ