ಕಾಂಗ್ರೆಸ್ ಸಿಎಂ ಆಯ್ಕೆಗಾಗಿ ಏಕಸಾಲಿನ ನಿರ್ಣಯ, ರಹಸ್ಯ ಮತದಾನ: ಬಿ ಕೆ ಹರಿಪ್ರಸಾದ್ - cm selection row
🎬 Watch Now: Feature Video
ಬೆಂಗಳೂರು: ಬೆಂಗಳೂರಿನ ಶಾಂಗ್ರಿಲಾ ಹೋಟೆಲ್ನಲ್ಲಿ ನಿನ್ನೆ ನಡೆದ ಶಾಸಕಾಂಗ ಸಭೆಯಲ್ಲಿ ಒಂದು ಸಾಲಿನ ನಿರ್ಣಯ ತೆಗೆದುಕೊಳ್ಳಲಾಗಿದೆ. ಮುಂದಿನ ಸಿಎಂ ಯಾರಾಗಬೇಕು ಎಂಬುದನ್ನು ಹೈಕಮಾಂಡ್ ನಿರ್ಧರಿಸಲಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಬಿ. ಕೆ ಹರಿಪ್ರಸಾದ್ ತಿಳಿಸಿದರು.
ಕಾಂಗ್ರೆಸ್ ವೀಕ್ಷಕರು, ಗೆಲುವು ಸಾಧಿಸಿದ ಎಲ್ಲ ಕಾಂಗ್ರೆಸ್ ಅಭ್ಯರ್ಥಿಗಳ ಅಭಿಪ್ರಾಯವನ್ನು ಸಂಗ್ರಹಿಸಿದ್ದಾರೆ. ಸಿಎಲ್ಪಿ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಅವರು ಒಂದು ಸಾಲಿನ ನಿರ್ಣಯವನ್ನು ಪಡೆದಿದ್ದಾರೆ. ಸಿಎಂ ಆಯ್ಕೆ ಪ್ರಕ್ರಿಯೆಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರ ವಿವೇಚನೆ ಬಿಡಲಾಗಿದೆ. ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಹೈಕಮಾಂಡ್ ಇದನ್ನು ಸುಲಲಿತವಾಗಿ ನಿರ್ವಹಿಸಲಿದೆ ಎಂದು ಅವರು ಹೇಳಿದರು.
ಗೆಲುವು ಸಾಧಿಸಿದ ನೂತನ ಅಭ್ಯರ್ಥಿಗಳು ರಹಸ್ಯವಾಗಿ ಮತದಾನ ಮಾಡಿದ್ದಾರೆ. ಏಕ ಸಾಲಿನ ನಿರ್ಣಯವನ್ನೂ ಅಂಗೀಕರಿಸಲಾಗಿದೆ. ವೀಕ್ಷಕರಾದ ಸುಶೀಲ್ಕುಮಾರ್ ಶಿಂಧೆ, ಜೀತೇಂದ್ರ ಸಿಂಗ್, ದೀಪಕ್ ಬಹುರಿಯಾ ಎಲ್ಲರ ಅಭಿಪ್ರಾಯ ಸಂಗ್ರಹಿಸಿ ದೆಹಲಿಗೆ ಪಯಣಿಸಿದ್ದಾರೆ. ಅಲ್ಲಿಯೇ ಇದೆಲ್ಲವೂ ನಿರ್ಣಯವಾಗಲಿದೆ. ಸೋನಿಯಾ, ರಾಹುಲ್ ಗಾಂಧಿ ಅವರೇ ಸಿಎಂ ಘೋಷಣೆ ಮಾಡಲಿದ್ದಾರೆ ಎಂದು ಹರಿಪ್ರಸಾದ್ ಸ್ಪಷ್ಟಪಡಿಸಿದರು.
ಸಿಎಂ ಆಯ್ಕೆ ವಿಚಾರವಾಗಿ ಈಗಾಗಲೇ ಮಾಜಿ ಸಿಎಂ ಸಿದ್ದರಾಮಯ್ಯ ಅವರು ದೆಹಲಿಗೆ ಪ್ರಯಾಣ ಕೈಗೊಂಡಿದ್ದು, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಸಹ ಇಂದೇ ದೆಹಲಿಗೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ.
ಓದಿ: 135 ಸ್ಥಾನಗಳೇ ನನಗೆ ರಾಜ್ಯದ ಜನರು ನೀಡಿದ ಜನ್ಮದಿನದ ಬಹುದೊಡ್ಡ ಗಿಫ್ಟ್: ಡಿ.ಕೆ.ಶಿವಕುಮಾರ್