ಕಾಂಗ್ರೆಸ್ ಜನರನ್ನು ಭಿಕ್ಷುಕರಂತೆ ಕಾಣುತ್ತಿದೆ: ಸಿಎಂ ಬೊಮ್ಮಾಯಿ ಕಟುಟೀಕೆ - ಪ್ರಜಾಧ್ವನಿ ಯಾತ್ರೆಯಲ್ಲಿ ನೋಟು ತೂರಿದ ಕಾಂಗ್ರೆಸ್
🎬 Watch Now: Feature Video
ಬೆಂಗಳೂರು: ಕಾಂಗ್ರೆಸ್ ರಾಜ್ಯದ ಜನರನ್ನು ಭಿಕ್ಷುಕರಂತೆ ಕಾಣುತ್ತಿದೆ. ಚುನಾವಣೆಯಲ್ಲಿ ಜನರೇ ಅವರಿಗೆ ಬುದ್ಧಿ ಕಲಿಸಲಿದ್ದಾರೆ. ಎಲ್ಲವನ್ನೂ ಮಾಡಿ ನಮ್ಮ ಮೇಲೆ ಗೂಬೆ ಕೂರಿಸುತ್ತಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್ ವಿರುದ್ಧ ಟೀಕಾಪ್ರಹಾರ ನಡೆಸಿದರು.
ಮಂಡ್ಯದಲ್ಲಿ ನಡೆದ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಯಲ್ಲಿ 500 ರೂಪಾಯಿ ನೋಟುಗಳನ್ನು ಜನರ ಮೇಲೆ ತೂರಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ತಿರುಗೇಟು ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ ಅವರು, ಕಾಂಗ್ರೆಸ್ ಎಲ್ಲವನ್ನೂ ಮಾಡುತ್ತದೆ. ಅದನ್ನು ಬೇರೆಯವರ ಮೇಲೆ ಹೊರೆಸುತ್ತಿದೆ. ಆ ಪಕ್ಷದ ಅಧ್ಯಕ್ಷರು ಕೂಡ ಅದೇ ಮಾಡುತ್ತಾರೆ. ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಾರೆ. ಜನರೇ ಇದನ್ನು ಜನರೇ ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.
ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಸರ್ವ ರೀತಿಯಲ್ಲೂ ಸಜ್ಜಾಗಿದೆ. ಬೂತ್ಮಟ್ಟದಿಂದ ಪಕ್ಷವನ್ನು ಬಲಪಡಿಸಲಾಗಿದೆ. ಚುನಾವಣಾ ಆಯೋಗ ಚುನಾವಣಾ ದಿನಾಂಕವನ್ನು ಪ್ರಕಟಿಸಿದೆ. ಮೇ 10 ರಂದು ಮತದಾನ ನಡೆಯಲಿದ್ದು, ಮೇ 13 ರಂದು ಫಲಿತಾಂಶ ಪ್ರಕಟವಾಗಲಿದೆ. ಚುನಾವಣಗಳಿಗೆ ನಮ್ಮ ಪಕ್ಷ ಸದಾ ಸಿದ್ಧವಾಗಿರುತ್ತದೆ. ಈ ಬಾರಿಯೂ ಅಭುತಪೂರ್ವ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.
ಓದಿ: ಕರ್ನಾಟಕ ವಿಧಾನಸಭೆ ಚುನಾವಣೆ: ಮೇ 10ಕ್ಕೆ ಮತದಾನ, 13ಕ್ಕೆ ಫಲಿತಾಂಶ