ರಾಹುಲ್ ಗಾಂಧಿ ಜೈಲು ಶಿಕ್ಷೆಗೆ ಸುಪ್ರೀಂ ತಡೆ; ಶಿವಮೊಗ್ಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ - ಈಟಿವಿ ಭಾರತ್​ ಕನ್ನಡ ನ್ಯೂಸ್

🎬 Watch Now: Feature Video

thumbnail

By

Published : Aug 4, 2023, 10:43 PM IST

ಶಿವಮೊಗ್ಗ : ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಅವರಿಗೆ ಅಧೀನ ನ್ಯಾಯಾಲಯ ವಿಧಿಸಿದ್ದ ಎರಡು ವರ್ಷಗಳ ಜೈಲು ಶಿಕ್ಷೆಗೆ ಸುಪ್ರಿಂ ಕೋರ್ಟ್ ಇಂದು ತಡೆಯಾಜ್ಞೆ ನೀಡಿದೆ. ಈ ಹಿನ್ನೆಲೆಯಲ್ಲಿ ನಗರದ ಕಾಂಗ್ರೆಸ್ ಭವನದ ಮುಂಭಾಗ ಪಕ್ಷದ ಕಾರ್ಯಕರ್ತರು ಸೇರಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು. ರಾಹುಲ್​ ಗಾಂಧಿ ಪರ ಘೋಷಣೆ ಕೂಗಿದರು. 

ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಸೂರತ್ ನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಇದಾದ ಬಳಿಕ ಸಂಸತ್‌ ಸದಸ್ಯ ಸ್ಥಾನ ಅನರ್ಹಗೊಂಡಿತ್ತು. ಈ ಬಗ್ಗೆ ಸುಪ್ರಿಂ ಕೋರ್ಟ್ ಮೊರೆ ಹೋಗಿದ್ದ ರಾಹುಲ್ ಗಾಂಧಿಗೆ ಇಂದು ಬಿಗ್ ರಿಲೀಫ್ ಸಿಕ್ಕಿದೆ. 

ಕಾಂಗ್ರೆಸ್ ಮುಖಂಡರಾದ ಚಂದ್ರಭೂಪಾಲ್, ವಿಜಯ್ ಕುಮಾರ್,ಎನ್. ರಮೇಶ್, ಚೇತನ್, ಸುವರ್ಣ ನಾಗರಾಜ್, ಕಲೀಂ ಪಾಷಾ ಸೇರಿದಂತೆ ಕಾಂಗ್ರೆಸ್‌ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ಭಾಗಿಯಾಗಿದ್ದರು. 

ಇದನ್ನೂ ಓದಿ : Modi surname case: ಮೋದಿ ಉಪನಾಮ ಪ್ರಕರಣ: ರಾಹುಲ್ ಗಾಂಧಿ ಶಿಕ್ಷೆಗೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.