ದೇಶದಲ್ಲಿ ಕಾಂಗ್ರೆಸಿಗರು ವಿನಾಶದ ಕೆಲಸ ಮಾಡುತ್ತಿದ್ದಾರೆ: ಮಧ್ಯಪ್ರದೇಶದ ಸಿಎಂ ಶಿವರಾಜ್‌ ಸಿಂಗ್‌ ಚೌಹಾಣ್‌ - kannada top news

🎬 Watch Now: Feature Video

thumbnail

By

Published : Mar 16, 2023, 10:47 PM IST

ವಿಜಯನಗರ: ದೇಶದಲ್ಲಿ ಕಾಂಗ್ರೆಸಿಗರು ವಿನಾಶದ ಕೆಲಸ ಮಾಡುತ್ತಿದ್ದರೆ, ಬಿಜೆಪಿ ವಿಕಾಸಕ್ಕಾಗಿ ಕೆಲಸ ಮಾಡುತ್ತಿದೆ. ಈ ವಿಜಯ ಸಂಕಲ್ಪ ಯಾತ್ರೆ ಬಿಜೆಪಿಗೆ ವಿಜಯವನ್ನು ತಂದು ಕೊಡಲಿದೆ ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಹೇಳಿದರು.

ಹೊಸಪೇಟೆ ನಗರದಲ್ಲಿ ಇಂದು ಏರ್ಪಡಿಸಿದ್ದ ಬಿಜೆಪಿ ರೋಡ್‌ ಶೋದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮೋದಿ, ಯಡಿಯೂರಪ್ಪ, ಬೊಮ್ಮಾಯಿ ಅವರ ಸರ್ಕಾರ, ಡಬಲ್ ಎಂಜಿನ್ ಸರ್ಕಾರ ಜನರ ಸಮಸ್ಯೆಗೆ ಪರಿಹಾರ ನೀಡಿದೆ. ಹಲವಾರು ಜನಪರ ಯೋಜನೆ ಮಾಡಿದ್ದೇವೆ, ರೈತರಿಗೆ ಕೇಂದ್ರ ರಾಜ್ಯ ಸರ್ಕಾರ 10 ಸಾವಿರ ರೂ. ನೀಡುತ್ತಿವೆ.  ಮಕ್ಕಳ ಶಿಕ್ಷಣಕ್ಕಾಗಿ ಹಲವು ಯೋಜನೆ ಜಾರಿಗೆ ತರಲಾಗಿದೆ ಎಂದು ಹೇಳಿದರು.

ಕೇವಲ ದೇಶದಲ್ಲಿ ಮಾತ್ರವಲ್ಲ ಜಗತ್ತಿನಾದ್ಯಂತ ಪ್ರಧಾನಿ ಮೋದಿಯವರ ಖ್ಯಾತಿ ಇದೆ, ಪಾಕಿಸ್ತಾನದ ಜನರು ಮೋದಿಯಂತಹ ನಾಯಕ ನಮಗಿರಬೇಕಿತ್ತು ಎನ್ನುತ್ತಿದ್ದಾರೆ, ನಾವು ಯಾರಿಗೂ ತೊಂದರೆ ಕೊಡಲ್ಲ, ನಮಗೆ ತೊಂದರೆ ಕೊಟ್ಟರೆ ನಾವು ಬಿಡಲ್ಲ, ನಾವು ಸರ್ಜಿಕಲ್ ಸ್ಟ್ರೈಕ್ ಮಾಡುತ್ತೇವೆ ಎಂದರು.

ಛತ್ತೀಸಗಡದಲ್ಲಿ ಇತ್ತೀಚೆಗೆ ನಡೆದ ಕಾಂಗ್ರೆಸ್‌ ಅಧಿವೇಶನದ ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬಿಸಿಲಿನಲ್ಲಿ ನಿಂತಿದ್ದರು. ಅವರಿಗೆ ಯಾವುದೇ ನೆರಳಿನ ವ್ಯವಸ್ಥೆ ಮಾಡಿರಲಿಲ್ಲ. ಆದರೆ, ಸೋನಿಯಾ ಗಾಂಧಿ ಅವರಿಗೆ ಕೊಡೆ ಹಿಡಿಯುತ್ತಾರೆ, ಹೀಗೆ ಕಾಂಗ್ರೆಸ್ಸಿನವರು ಕರ್ನಾಟಕಕ್ಕೆ ಅವಮಾನ ಮಾಡುತ್ತಾರೆ. ಕರ್ನಾಟಕದಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ ನಡುವೆ ಹೊಂದಾಣಿಕೆ ಇಲ್ಲ. ಜೆಡಿಎಸ್‌ನಿಂದ ಕಾಂಗ್ರೆಸ್​​​ಗೆ ಅನುಕೂಲ. ರಾಜ್ಯದಲ್ಲಿ ಪುನಃ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.

ಇದನ್ನೂ ಓದಿ: ವಿಜಯಪುರ ಬಳಿ ಕೇಂದ್ರ ಸಚಿವೆ ಸಾಧ್ವಿ ನಿರಂಜನಾ‌ ಜ್ಯೋತಿ ಕಾರು ಅಪಘಾತ

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.