ತಿರುಪತಿಯಲ್ಲಿ ಗೌತಮ್ ಗಂಭೀರ್... ವೆಂಕಟೇಶ್ವರನ ದರ್ಶನ ಪಡೆದ ಮಾಜಿ ಕ್ರಿಕೆಟಿಗ VIDEO - ಬಿಜೆಪಿ ಸಂಸದ ಗೌತಮ್ ಗಂಭೀರ್
🎬 Watch Now: Feature Video
Published : Sep 28, 2023, 12:11 PM IST
ತಿರುಪತಿ (ಆಂಧ್ರಪ್ರದೇಶ): ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆಯಲು ತಿರುಮಲಕ್ಕೆ ಆಗಮಿಸಿದ ಟೀಂ ಇಂಡಿಯಾದ ಮಾಜಿ ಕ್ರಿಕೆಟ್ ಆಟಗಾರ ಮತ್ತು ಬಿಜೆಪಿ ಸಂಸದ ಗೌತಮ್ ಗಂಭೀರ್ ಅವರು ಸುಪ್ರಭಾತ ಸೇವೆಯಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ದೇವಸ್ಥಾನದ ಸಿಬ್ಬಂದಿಯು ಗಂಭೀರ್ ಅವರಿಗೆ ತೀರ್ಥ ಪ್ರಸಾದ ವಿತರಿಸಿದರು. ಬಳಿಕ, ದೇವಸ್ಥಾನದ ಹೊರಭಾಗದಲ್ಲಿದ್ದ ಹಲವು ಕ್ರಿಕೆಟ್ ಅಭಿಮಾನಿಗಳು ಗಂಭೀರ್ ಜೊತೆ ಫೋಟೊ, ಸೆಲ್ಫಿ ತೆಗೆದುಕೊಂಡರು.
ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಭಾರತದ ಮಾಜಿ ಆರಂಭಿಕ ಆಟಗಾರ, "ಅಕ್ಟೋಬರ್‌ನಲ್ಲಿ ನಡೆಯಲಿರುವ ಕ್ರಿಕೆಟ್ ವಿಶ್ವಕಪ್ ಗೆಲ್ಲುವ ಉತ್ತಮ ಅವಕಾಶ ಭಾರತ ತಂಡಕ್ಕೆ ಇದೆ, 140 ಕೋಟಿ ಭಾರತೀಯರ ಪ್ರಾರ್ಥನೆಯಿಂದ ಈ ಸಲ ವಿಶ್ವಕಪ್ ಗೆಲ್ಲುವುದು ಖಚಿತ" ಎಂದು ಭರವಸೆ ವ್ಯಕ್ತಪಡಿಸಿದರು.
ಇನ್ನು ಮುಂದಿನ ತಿಂಗಳು ಭಾರತದಲ್ಲಿ ಏಕದಿನ ವಿಶ್ವಕಪ್ ಆರಂಭವಾಗಲಿದ್ದು, ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಪಂದ್ಯ ಅಹಮದಾಬಾದ್‌ನಲ್ಲಿ ನಡೆಯಲಿದೆ. ಅಕ್ಟೋಬರ್ 8 ರಂದು ಚೆನ್ನೈನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತದ ಮೊದಲ ಪಂದ್ಯ ನಡೆಯಲಿದೆ. ಸದ್ಯಕ್ಕೆ ಟೀಂ ಇಂಡಿಯಾ ಏಕದಿನ ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನದಲ್ಲಿದೆ.
ಇದನ್ನೂ ಓದಿ : Kapil Dev: "ನಟನೆಯ ವಿಶ್ವಕಪ್ನ್ನೂ ನೀವೇ ಗೆಲ್ಲುತ್ತೀರಿ".. ಕಪಿಲ್ ದೇವ್ಗೆ ಗಂಭೀರ್ ಹೀಗೆ ಹೇಳಿದ್ದೇಕೆ?