Watch Video: ಬೆಂಗಳೂರಲ್ಲಿ ಹಾಡಹಗಲೇ ಮಾರಕಾಸ್ತ್ರ ತೋರಿಸಿ ಸುಲಿಗೆ! - ಬೆಂಗಳೂರಲ್ಲಿ ಹಾಡಹಗಲೇ ಮಾರಕಾಸ್ತ್ರ ತೋರಿಸಿ ಸುಲಿಗೆ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/03-08-2023/640-480-19172937-thumbnail-16x9-cctvnews.jpg)
ಬೆಂಗಳೂರು: ಹಾಡಹಗಲೇ ದ್ವಿಚಕ್ರ ವಾಹನ ಸವಾರನನ್ನು ಅಡ್ಡಗಟ್ಟಿ, ಮಾರಕಾಸ್ತ್ರ ತೋರಿಸಿ ದರೋಡೆ ಮಾಡಿರುವ ಘಟನೆ ಬುಧವಾರ ಮಧ್ಯಾಹ್ನ 2.30ರ ಸುಮಾರಿಗೆ ಜೆಸಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ವಿಲಿಯಮ್ಸ್ ಟೌನ್ನಲ್ಲಿ ನಡೆದಿದೆ. ಹೆಲ್ಮೆಟ್ ಧರಿಸಿ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಖದೀಮರು ಸ್ಕೂಟಿಯಲ್ಲಿ ಹೋಗುತ್ತಿದ್ದ ಸವಾರನನ್ನು ಅಡ್ಡಗಟ್ಟಿದ್ದಾರೆ. ಬಳಿಕ ಮಾರಕಾಸ್ತ್ರ ತೋರಿಸಿ ಆತನ ಜೇಬಿನಲ್ಲಿದ್ದ ಮೊಬೈಲ್ ಫೋನ್, ವ್ಯಾಲೆಟ್ ಕಿತ್ತುಕೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಬಗ್ಗೆ ಸಾರ್ವಜನಿಕರೊಬ್ಬರು ಟ್ವೀಟ್ ಮಾಡುವ ಮೂಲಕ ಪೊಲೀಸರ ಗಮನಕ್ಕೆ ತಂದಿದ್ದಾರೆ. ಆದರೆ ಠಾಣೆಗೆ ಈವರೆಗೂ ಯಾವುದೇ ದೂರು ಬಂದಿಲ್ಲ ಎಂದು ತಿಳಿದು ಬಂದಿದೆ.
ಬೆಂಗಳೂರಲ್ಲಿ ಕಳ್ಳರ ಹಾವಳಿಗೆ ಬ್ರೇಕ್ ಬೀಳುತ್ತಿಲ್ಲ. ರಾತ್ರಿ ವೇಳೆ ಕೃತ್ಯ ಎಸಗುತ್ತಿದ್ದ ಖದೀಮರು ಇದೀಗ ಹಾಡಹಗಲೇ ಕೈಚಳಕ ತೋರಿಸುತ್ತಿದ್ದಾರೆ. ಬುಧವಾರ ಬೆಳಗ್ಗೆ ತಾವರೆಕೆರೆಯಲ್ಲಿ ಚಿನ್ನದಂಗಡಿಗೆ ಕಳ್ಳರು ಕನ್ನ ಹಾಕಿದ್ದ ಘಟನೆ ನಡೆದಿತ್ತು. ಗ್ಯಾಸ್ ಕಟ್ಟರ್ ಬಳಸಿ ಹೆದ್ದಾರಿ ಬದಿಯಲ್ಲಿದ್ದ ಚಿನ್ನದಂಗಡಿಗೆ ನುಗ್ಗಿ ಚಿನ್ನ ದೋಚಲು ಯತ್ನಿಸಿ ವಿಫಲರಾಗಿದ್ದರು. ಇದು ಸಿಸಿಟಿವಿಯಲ್ಲಿ ಸೆರೆಯಾಗಿತ್ತು.
ಇದನ್ನೂ ಓದಿ: Watch video: ಗ್ಯಾಸ್ ಕಟ್ಟರ್ ಮೂಲಕ ಚಿನ್ನ ದೋಚಲು ಪ್ಲಾನ್; ಅಂಗಡಿಯಲ್ಲಿ ಸಿಬ್ಬಂದಿ ಕಂಡು ಕಳ್ಳರ ಗ್ಯಾಂಗ್ ಎಸ್ಕೇಪ್