ಮಲಪ್ರಭಾ ನದಿಯಲ್ಲಿ ಮೊಸಳೆ ಪ್ರತ್ಯಕ್ಷ-ವಿಡಿಯೋ - ಮಲಪ್ರಭಾ ನದಿ
🎬 Watch Now: Feature Video
Published : Nov 16, 2023, 12:08 PM IST
ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲೂಕಿನ ಘಟಕನೂರ ಗ್ರಾಮದ ಹೊರವಲಯದಲ್ಲಿ ಮಲಪ್ರಭಾ ನದಿಯಲ್ಲಿ ಮೊಸಳೆ ಪ್ರತ್ಯಕ್ಷವಾಗಿದ್ದು ಘಟಕನೂರ ಸೇರಿ ಸುತ್ತಲಿನ ಗ್ರಾಮಗಳ ಜನರು ಆತಂಕಕ್ಕೆ ಒಳಗಾಗಿದ್ಧಾರೆ. ನದಿಯಲ್ಲಿ ಮೊಸಳೆ ಈಜಿಕೊಂಡು ಹೋಗುತ್ತಿರುವ ಮತ್ತು ನದಿ ದಂಡೆ ಹೊರಗೂ ಕಾಣಿಸಿಕೊಂಡಿರುವ ದೃಶ್ಯ ಸ್ಥಳೀಯರ ಮೊಬೈಲ್ನಲ್ಲಿ ಸೆರೆಯಾಗಿದೆ.
ಮೊಸಳೆ ಪ್ರತ್ಯಕ್ಷವಾದ ಬೆನ್ನಲ್ಲೇ ಸೆರೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿಯಿಂದ ಕಾರ್ಯಾಚರಣೆ ಶುರುವಾಗಿದೆ. ಮಲಪ್ರಭಾ ನದಿ ಪಕ್ಕದಲ್ಲಿ ವಾಸವಾಗಿರುವ ಜನರು ಎಚ್ಚರಿಕೆಯಿಂದಿರಬೇಕು. ಮಕ್ಕಳು, ಹಸು, ಎಮ್ಮೆ, ಮೇಕೆ ಸೇರಿ ಸಾಕು ಪ್ರಾಣಿಗಳನ್ನು ನದಿಗೆ ತರದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಇದಕ್ಕೂ ಮುನ್ನ 2019ರಲ್ಲಿ ಜಿಲ್ಲೆಯ ಗೋಕಾಕ್ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ಹರಿಯುವ ಮಲಪ್ರಭಾ ನದಿಯಲ್ಲಿ ಎರಡು ಮೊಸಳೆಗಳು ಕಾಣಿಸಿಕೊಂಡಿದ್ದವು.
ಇತ್ತೀಚೆಗೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ಸಮೀಪದ ಕೂಡ್ಲೂರು ಗ್ರಾಮದ ಹೊರವಲಯದ ಹತ್ತಿಯ ಹೊಲದಲ್ಲಿ ಅಂದಾಜು 150 ಕೆ.ಜಿ ತೂಕದ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷವಾಗಿತ್ತು. ಮಾಹಿತಿ ಪಡೆದ ಅರಣ್ಯ ಇಲಾಖೆಯವರು ಮೊಸಳೆ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದರು.
ಇದನ್ನೂ ಓದಿ: ಕೊಡಗು: ತಾಯಿ ಮಡಿಲು ಸೇರಿದ ಮರಿಯಾನೆ- ವಿಡಿಯೋ