ಟ್ರ್ಯಾಕ್ಟರ್ ಮೂಲಕ ಬಡ ಕೂಲಿ ಕಾರ್ಮಿಕನ ಮನೆ ಕೆಡವಿದ ದುರುಳರು - ಮನೆಯನ್ನು ಟ್ರ್ಯಾಕ್ಟರ್ ಮೂಲಕ ಧ್ವಂಸ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-16191896-thumbnail-3x2-sefdd.jpg)
ಉತ್ತರಪ್ರದೇಶದ ಲಖೀಂಪುರ ಖೇರಿ ಜಿಲ್ಲೆಯ ಭೀರಾ ಗ್ರಾಮದಲ್ಲಿ ದುಷ್ಕರ್ಮಿಗಳು ಬಡ ಕೂಲಿ ಕಾರ್ಮಿಕನ ಮನೆಯನ್ನು ಟ್ರ್ಯಾಕ್ಟರ್ ಮೂಲಕ ಧ್ವಂಸಗೊಳಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗ್ತಿದೆ. ಸಂತ್ರಸ್ತ ಕುಟುಂಬಸ್ಥರು ಕೆಲ ದಿನಗಳ ಹಿಂದೆ ಈ ಬಗ್ಗೆ ದೂರು ನೀಡಿದ್ರು ಸಹ ಪೊಲೀಸರು ಯಾವುದೇ ಕ್ರಮ ಕೈಗೊಂಡಿರಲಿಲ್ಲ. ವಿಡಿಯೋ ವೈರಲ್ ಆಗ್ತಿದ್ದಂತೆ ಪೊಲೀಸರು ಕ್ರಮ ಕೈಗೊಂಡು ಮೂವರನ್ನು ಬಂಧಿಸಿದ್ದಾರೆ. ಸಮಾಜವಾದಿ ಪಕ್ಷ, ಆಮ್ ಆದ್ಮಿ ಪಕ್ಷಗಳು ಈ ವಿಡಿಯೋವನ್ನು ತಮ್ಮ ಟ್ವಿಟರ್‌ನಲ್ಲಿ ಪೋಸ್ಟ್ ಮಾಡುವ ಮೂಲಕ ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿವೆ. ಭೀರಾ ಪಟ್ಟಣದಲ್ಲಿ, ಮುಸ್ಲಿಂ ಬಡ ಕುಟುಂಬವು ಶಾಲೆಯೊಂದರ ನೆರೆಹೊರೆಯಲ್ಲಿ ಮನೆ ಕಟ್ಟಿಕೊಂಡು ವಾಸಿಸುತ್ತಿತ್ತು. ಈಗ ಈ ಜಮೀನು ರಸ್ತೆಯ ಪಕ್ಕದಲ್ಲಿದ್ದು ಕೋಟ್ಯಂತರ ರೂ. ಬೆಲೆಬಾಳುತ್ತಿದೆ. ಆದ್ದರಿಂದಲೇ ಸರ್ಕಾರ ಈ ಭೂಮಿಯನ್ನು ವಶಪಡಿಸಿಕೊಳ್ಳಲು ಬಯಸುತ್ತದೆ ಎಂಬ ಆರೋಪ ಕೇಳಿ ಬಂದಿದೆ.
Last Updated : Feb 3, 2023, 8:27 PM IST