ದಕ್ಷಿಣಕನ್ನಡ ಜಿಲ್ಲೆಯ ಎಂಟು ಕ್ಷೇತ್ರದ ಸಂಭಾವ್ಯ ಅಭ್ಯರ್ಥಿಗಳ ಆಯ್ಕೆಗೆ ಬಿಜೆಪಿಯಿಂದ ಆಂತರಿಕ ಚುನಾವಣೆ
🎬 Watch Now: Feature Video
ಮಂಗಳೂರು: ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಬಿಜೆಪಿಯಲ್ಲಿ ಆಂತರಿಕ ಚುನಾವಣೆ ಶುಕ್ರವಾರ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆಗೆ ಬಿಜೆಪಿಯಿಂದ ಆಂತರಿಕ ಚುನಾವಣೆ ಮಂಗಳೂರಿನ ಆರ್ ಎಸ್ ಎಸ್ ಶಕ್ತಿ ಕೇಂದ್ರವಾದ ಸಂಘನಿಕೇತನದಲ್ಲಿ ಜರುಗಿತು.
ಈ ಆಂತರಿಕ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶಕ್ತಿ ಕೇಂದ್ರ, ಮಂಡಲ, ಪ್ರಕೋಷ್ಠ, ಮೋರ್ಚಾಗಳ ಅಧ್ಯಕರು, ಉಪಾಧ್ಯಕ್ಷರು, ಪದಾಧಿಕಾರಿಗಳು ಭಾಗಿಯಾಗಿದ್ದರು. 8 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ 800 ಕ್ಕೂ ಅಧಿಕ ಪದಾಧಿಕಾರಿಗಳು ಚುನಾವಣೆಯಲ್ಲಿ ಪಾಲ್ಗೊಂಡಿದ್ದರು. ರಹಸ್ಯವಾಗಿ ಆಂತರಿಕ ಚುನಾವಣೆ ನಡೆಯುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ನಡೆಯುತ್ತಿದೆ.
ಅಭ್ಯರ್ಥಿಗಳ ಆಯ್ಕೆಗೆ ಮತದಾನ ವ್ಯವಸ್ಥೆ: ಇದೇ ಮೊದಲ ಬಾರಿಗೆ ಅಭ್ಯರ್ಥಿಗಳ ಆಯ್ಕೆಗೆ ರಾಜ್ಯ ಬಿಜೆಪಿಯಲ್ಲಿ ವೋಟಿಂಗ್ ವ್ಯವಸ್ಥೆಯ ಪ್ರಾಯೋಗಿಕ ಪರಿಚಯ ಮಾಡಲಾಗಿದೆ. ಶುಕ್ರವಾರ ಇಡೀ ದಿನ ವಿವಿಧ ಜಿಲ್ಲೆಗಳಲ್ಲಿ ಬಿಜೆಪಿಯಿಂದ ಅಭಿಪ್ರಾಯ ಸಂಗ್ರಹ ಕಾರ್ಯ ನಡೆದಿದೆ. ಎಲ್ಲ ಜಿಲ್ಲೆಗಳಿಗೂ ಸಂಭಾವ್ಯರ ಬಗ್ಗೆ ಅಭಿಪ್ರಾಯ ಸಂಗ್ರಹಕ್ಕೆ ಭೇಟಿ ಮಾಡಲಿರುವ ತಂಡಗಳು ಇಂದು ಈ ವರದಿಗಳನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ವರದಿ ಸಲ್ಲಿಕೆ ಮಾಡಲಿವೆ.
ಆಂತರಿಕ ಚುನಾವಣೆ ಬಿಜೆಪಿ ವೈಫಲ್ಯವನ್ನು ತೋರಿಸುತ್ತಿದೆ - ಖಾದರ್ : ಬಿಜೆಪಿಯು ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ವಿಪಕ್ಷ ಉಪನಾಯಕ ಯು ಟಿ ಖಾದರ್ ವ್ಯಂಗ್ಯವಾಡಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಶಿಸ್ತಿನ ಪಕ್ಷದಲ್ಲಿ ಯಾರಿಗೆ ಟಿಕೆಟ್ ಕೊಡಬೇಕು ಎಂದು ಆಂತರಿಕ ಚುನಾವಣೆ ನಡೆಸುವ ಮಟ್ಟಕ್ಕೆ ಬಂದಿರುವುದು, ಪಕ್ಷದ ಚುಕ್ಕಾಣಿಯ ವೈಫಲ್ಯವನ್ನು ತೋರಿಸುತ್ತದೆ ಎಂದು ಟೀಕಿಸಿದ್ದಾರೆ.
ಇದನ್ನೂಓದಿ:ನೀತಿ ಸಂಹಿತೆ: ಯಾವುದೇ ರಾಜಕೀಯ ಕಾರ್ಯಕ್ರಮ ಮಾಡಬೇಕಾದರೆ ಅನುಮತಿ ಕಡ್ಡಾಯ : ಜಿಲ್ಲಾಧಿಕಾರಿ ಕೆ ವಿ. ರಾಜೇಂದ್ರ