ಚಿಕ್ಕಮಗಳೂರು: ಶ್ರೀರಾಮ ಸೇನೆಯಿಂದ ದತ್ತಮಾಲಾ ಅಭಿಯಾನಕ್ಕೆ ಚಾಲನೆ- ವಿಡಿಯೋ - ETV Bharat Karnataka
🎬 Watch Now: Feature Video
Published : Oct 30, 2023, 9:29 PM IST
ಚಿಕ್ಕಮಗಳೂರು: ಶ್ರೀರಾಮ ಸೇನೆಯ ವತಿಯಿಂದ ಅದ್ಧೂರಿಯಾಗಿ ದತ್ತಮಾಲ ಅಭಿಯಾನ ಆರಂಭಿಸಲಾಗಿದೆ. ಚಿಕ್ಕಮಗಳೂರಿನಲ್ಲಿ ಅಭಿಯಾನಕ್ಕೆ ಸಂಘಟನೆಯ ಮುಖಂಡರು ಹಾಗೂ ಕಾರ್ಯಕರ್ತರು ಚಾಲನೆ ನೀಡಿದರು.
ನಗರದ ಶಂಕರಮಠದಲ್ಲಿ ಮಾಲಾಧಾರಣೆ ನಡೆಯಿತು. 50 ಕ್ಕೂ ಹೆಚ್ಚು ಶ್ರೀ ರಾಮಸೇನೆ ಕಾರ್ಯಕರ್ತರು ಮಾಲಾಧಾರಣೆ ಮಾಡಿದರು. ಶ್ರೀರಾಮ ಸೇನೆಯ ಕಾರ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಸೇರಿ ಹಲವರಿಂದ ಮಾಲಾಧಾರಣೆ ನೆರವೇರಿತು. ಇಂದಿನಿಂದ ಏಳು ದಿನ ದಿನಗಳ ಕಾಲ ಚಿಕ್ಕಮಗಳೂರು ಜಿಲ್ಲೆಯಲ್ಲಿ ದತ್ತಮಾಲಾ ಅಭಿಯಾನ ನಡೆಯಲಿದೆ.
ಇನಾಂ ದತ್ತಾತ್ರೇಯ ಪೀಠದಲ್ಲಿ ನವೆಂಬರ್ 5 ರಂದು ಸಾವಿರಾರು ದತ್ತ ಮಾಲಾಧಾರಿಗಳು ದತ್ತ ಪಾದುಕೆ ದರ್ಶನ ಪಡೆಯಲಿದ್ದಾರೆ. ಈಗಾಗಲೇ ಜಿಲ್ಲಾ ಪೊಲೀಸ್ ಇಲಾಖೆ ಈ ಬಗ್ಗೆ ದತ್ತಪೀಠಕ್ಕೆ ತೆರಳಿ ಸ್ಥಳ ಪರಿಶೀಲನೆ ನಡೆಸಿದೆ. ನಗರದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆದಂತೆ ಸೂಕ್ಷ್ಮ, ಅತಿ ಸೂಕ್ಷ್ಮ, ಸಾಮಾನ್ಯ ಎಂಬ ಪ್ರದೇಶವನ್ನು ಗುರುತು ಮಾಡಲಾಗಿದೆ. ಪ್ರತಿ ಸ್ಥಳಕ್ಕೂ ಪೊಲೀಸರನ್ನು ನಿಯೋಜಿಸಿ ಎಚ್ಚರಿಕೆ ವಹಿಸಲಾಗಿದೆ.
ಇದನ್ನೂ ಓದಿ: 'ಸುರರು-ಅಸುರರು ಕಾದಾಡಿದರು, ಭಕ್ತ ಕೋಟಿಗೆ ಮಂಗಳವಾಯಿತು..': ಮೈಲಾರಲಿಂಗ ಸ್ವಾಮಿಯ ಕಾರ್ಣಿಕ ನುಡಿ- ವಿಡಿಯೋ