ದಾವಣಗೆರೆ ಉತ್ತರ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಲೋಕಿಕೆರೆ ನಾಗರಾಜ್ ಹೇಳಿದ್ದೇನು? - ಈಟಿವಿ ಭಾರತ ಕನ್ನಡ

🎬 Watch Now: Feature Video

thumbnail

By

Published : Apr 18, 2023, 3:25 PM IST

ದಾವಣಗೆರೆ : ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರ ಚುನಾವಣಾ ಕಣದಿಂದ ಹಾಲಿ ಶಾಸಕ ಎಸ್.ಎ.ರವೀಂದ್ರನಾಥ್ ಹಿಂದೆ ಸರಿದ ಬೆನ್ನಲ್ಲೇ ಬಿಜೆಪಿ ಮತ್ತೆ ಲಿಂಗಾಯತರಿಗೆ ಮಣೆ ಹಾಕಿದೆ. ಕಾಂಗ್ರೆಸ್ ಅಭ್ಯರ್ಥಿ ಎಸ್.ಎಸ್.ಮಲ್ಲಿಕಾರ್ಜುನ ವಿರುದ್ಧ ಬಿಜೆಪಿಯು ಸಾಮಾನ್ಯ ಕಾರ್ಯಕರ್ತ ಲೋಕಿಕೆರೆ ನಾಗರಾಜ್ ಅವರನ್ನು ಕಣಕ್ಕಿಳಿಸಿದೆ. ಈಟಿವಿ ಭಾರತದೊಂದಿಗೆ ಮಾತನಾಡಿದ ಅವರು, ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿಯು ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ನೀಡಿದೆ. ಯಾರಿಗೆ ಟಿಕೆಟ್​​ ಘೋಷಣೆಯಾಗಲಿದೆ ಎಂದು ಕುತೂಹಲವಿತ್ತು. ಇದೀಗ ಟಿಕೆಟ್ ಘೋಷಣೆ ಆಗಿರುವುದರಿಂದ ಕೈ ನಾಯಕರಿಗೆ ಭಯ ಶುರುವಾಗಿದೆ ಎಂದರು.

ಈಗಾಗಲೇ ನಮ್ಮ ಸಂಸದರು, ಶಾಸಕ ಎಸ್.ಎ.ರವೀಂದ್ರನಾಥ್ ಹಾಗು ಮುಖಂಡರನ್ನು ಭೇಟಿ ಮಾಡಿ ಮಾತನಾಡಿದ್ದೇನೆ. ಬಿಜೆಪಿಯಲ್ಲಿ ತಳಮಟ್ಟದಿಂದ ಸಂಘಟಿತ ವ್ಯವಸ್ಥೆ ಇದೆ. ಬೂತ್​ ಮಟ್ಟದಿಂದ ಕಾರ್ಯಕರ್ತರಿದ್ದಾರೆ. ಚುನಾವಣಾ ಸಂಬಂಧ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದವರು ಇಪ್ಪತ್ತು ದಿನಗಳ ಕಾಲ ಕೆಲಸ ಮಾಡುವುದು ಮತ್ತು ನಾವು ಮೂರು ದಿನಗಳ ಕಾಲ ಕೆಲಸ ಮಾಡುವುದು ಒಂದೇ ಎಂದು ಹೇಳಿದರು.ಸುಮಾರು 25,000 ಮತಗಳ ಅಂತರದಿಂದ ಗೆಲ್ಲುತ್ತೇನೆ ಎಂದು ಇದೇ ವೇಳೆ ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ : 'ನನಗೆ ಟಿಕೆಟ್ ತಪ್ಪಲು ಬಿ ಎಲ್ ಸಂತೋಷ್​ ಕಾರಣ.. ಮಾನಸ ಪುತ್ರನ ಮೇಲಿನ ಪ್ರೇಮಕ್ಕೆ ನನ್ನ ಬಲಿ ಕೊಟ್ಟರು'

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.