ಹಾಡಹಗಲೇ ದರೋಡೆ : 14 ಕೋಟಿ ಮೌಲ್ಯದ ಚಿನ್ನಾಭರಣದೊಂದಿಗೆ ಖದೀಮರು ಪರಾರಿ - ಈಟಿವಿ ಭಾರತ ಕನ್ನಡ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/640-480-18680617-thumbnail-16x9-yyy.jpg)
ಸಾಂಗ್ಲಿ (ಮಹಾರಾಷ್ಟ್ರ) : ಪೊಲೀಸರ ಸೋಗಿನಲ್ಲಿ ಬಂದ ದರೋಡೆಕೋರರು ಸುಮಾರು 14 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ದೋಚಿ ಪರಾರಿಯಾಗಿರುವ ಘಟನೆ ನಗರದ ಮೀರಜ್ ರಸ್ತೆಯಲ್ಲಿರುವ ರಿಲಯನ್ಸ್ ಆಭರಣ ಮಳಿಗೆಯಲ್ಲಿ ನಡೆದಿದೆ. ಇಂದು ಮಧ್ಯಾಹ್ನ 3.30ರ ಸುಮಾರಿಗೆ ಆಗಮಿಸಿದ ದರೋಡೆಕೋರರ ತಂಡ ಮಳಿಗೆಯಲ್ಲಿದ್ದ ಗ್ರಾಹಕರನ್ನು ಮತ್ತು ಸಿಬ್ಬಂದಿಗಳನ್ನು ಬೆದರಿಸಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಹಾಡಹಗಲೇ ದರೋಡೆ ನಡೆದಿರುವುದನ್ನು ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.
ದರೋಡೆಕೋರರು ಮಳಿಗೆಯಲ್ಲಿದ್ದ ಸಿಬ್ಬಂದಿ ಮತ್ತು ಗ್ರಾಹಕರನ್ನು ಬೆದರಿಸಲು ಗಾಳಿಯಲ್ಲಿ ಗುಂಡು ಹಾರಿಸಿದ್ದು, ಈ ವೇಳೆ ಮಳಿಗೆಯಲ್ಲಿದ್ದ ಗ್ರಾಹಕರೊಬ್ಬರಿಗೆ ಗುಂಡು ತಗುಲಿ ಗಾಯಗೊಂಡಿದ್ದಾರೆ. ಅಲ್ಲದೆ ಮಳಿಗೆಯಲ್ಲಿದ್ದವರಿಗೆ ಥಳಿಸಿದ್ದಾರೆ ಎಂದು ಹೇಳಲಾಗಿದೆ. ಈ ದರೋಡೆಯ ದೃಶ್ಯಗಳು ಮಳಿಗೆಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ದರೋಡೆಕೋರರು ಎರಡು ಕಾರುಗಳಲ್ಲಿ ಬಂದಿದ್ದರು ಎಂದು ತಿಳಿದುಬಂದಿದೆ.
ಘಟನೆ ಬಗ್ಗೆ ಮಾಹಿತಿ ತಿಳಿದ ತಕ್ಷಣ ಅಪರಾಧ ತನಿಖಾ ದಳದ ಪೊಲೀಸರು ಮತ್ತು ಪೊಲೀಸ್ ವರಿಷ್ಠಾಧಿಕಾರಿ ಬಸವರಾಜ ತೇಲಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ದರೋಡೆಕೋರರನ್ನು ಪತ್ತೆ ಹಚ್ಚಲು ವಿಶೇಷ ತಂಡಗಳನ್ನು ರಚಿಸಲಾಗಿದ್ದು, ಜಿಲ್ಲೆಯಾದ್ಯಂತ ದರೋಡೆಕೋರ ಪತ್ತೆಗೆ ದಿಗ್ಬಂಧನ ಮಾಡಲಾಗಿದೆ.
ಇದನ್ನೂ ಓದಿ : ದತ್ತು ಸ್ವೀಕಾರ ಕೇಂದ್ರದಲ್ಲಿ ಮಕ್ಕಳ ಮೇಲೆ ಮಹಿಳಾಧಿಕಾರಿಯ ದೌರ್ಜನ್ಯ: ವಿಡಿಯೋ ವೈರಲ್