ಎಸ್‌ಡಿಪಿಐ ಪ್ರತಿಭಟನೆ ವೇಳೆ ತಳ್ಳಾಟ.. ನೆಲಕ್ಕೆ ಬಿದ್ದ ಡಿಸಿಪಿ, 50ಕ್ಕೂ ಹೆಚ್ಚು ಕಾರ್ಯಕರ್ತರು ವಶಕ್ಕೆ - ಈಟಿವಿ ಭಾರತ ಕರ್ನಾಟಕ
🎬 Watch Now: Feature Video

ಹುಬ್ಬಳ್ಳಿ: ಎಸ್‌ಡಿಪಿಐ ಹಾಗೂ ಪಿಎಫ್ಐ ಕಚೇರಿಗಳ ಮೇಲೆ ಎನ್ಐಎ ದಾಳಿ ಖಂಡಿಸಿ ಪ್ರತಿಭಟನೆ ವೇಳೆ ಕಾರ್ಯಕರ್ತರ ತಳ್ಳಾಟದಿಂದಾಗಿ ಕಾನೂನು ಸುವ್ಯವಸ್ಥೆ ಡಿಸಿಪಿ ಸಾಹಿಲ್ ಬಾಗ್ಲಾ ನೆಲಕ್ಕೆ ಬಿದ್ದರುವ ಘಟನೆ ನಡೆದಿದೆ. ಹುಬ್ಬಳ್ಳಿ ಕೌಲ್ ಪೇಟೆಯಲ್ಲಿ ಎನ್ಐಎ ದಾಳಿ ಖಂಡಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನಾಕಾರರನ್ನು ಬಂಧಿಸುವ ವೇಳೆ ಗಲಭೆ ವಾತಾವರಣ ನಿರ್ಮಾಣವಾಗಿದೆ. ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ತಳ್ಳಿಕೊಂಡು ಬಂದ ಕಾರಣ ಡಿಸಿಪಿ ಕೆಳಗೆ ಬಿದ್ದಿದ್ದಾರೆ. ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಹು-ಧಾ ಪೊಲೀಸ್ ಆಯುಕ್ತ ಲಾಬೂರಾಮ್, ರಸ್ತೆಯನ್ನ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದವರನ್ನ ಚದುರಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಲಾಗಿದೆ. 50 ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನ ವಶಕ್ಕೆ ಪಡೆದಿದ್ದೇವೆ. ಮುಂಜಾಗ್ರತಾ ಕ್ರಮವಾಗಿ ಹುಬ್ಬಳ್ಳಿ-ಧಾರವಾಡದಲ್ಲಿ ಪೊಲೀಸ್‌ರನ್ನ ನಿಯೋಜಿಸಿಲಾಗಿದೆ. ಪ್ರತಿಭಟನಾನಿರತರ ವಿಚಾರಣೆ ಬಳಿಕ ಇನ್ನಷ್ಟು ಮಾಹಿತಿ ಲಭ್ಯವಾಗಲಿದೆ ಎಂದರು.
Last Updated : Feb 3, 2023, 8:28 PM IST