ಕೈಕೊಟ್ಟ ಕರೆಂಟ್, ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಕಲಾಪ ನಡೆಸಿದ ತುಮಕೂರು ಉಪವಿಭಾಗಾಧಿಕಾರಿ-ವಿಡಿಯೋ
🎬 Watch Now: Feature Video
ತುಮಕೂರು : ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ಸಂಕೀರ್ಣದಲ್ಲಿರುವ ಎಸಿ ಕೋರ್ಟ್ನಲ್ಲಿ ಇಂದು ಕಲಾಪ ನಡೆಯುತ್ತಿದ್ದಾಗ ವಿದ್ಯುತ್ ಕೈಕೊಟ್ಟಿತು. ಈ ಸಂದರ್ಭದಲ್ಲಿ ಉಪ ವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ಸ್ಥಳದಲ್ಲಿದ್ದ ವಕೀಲರು ಹಾಗೂ ಇತರರ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಕಲಾಪ ಮುಂದುವರಿಸಿದರು. ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿ ಯುಪಿಎಸ್ ಸೌಲಭ್ಯ ಕಲ್ಪಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಕುಣಿಗಲ್ನಲ್ಲಿ ಅಧಿಕಾರಿಗಳ ಸಭೆ ನಡೆಸಿದ್ದ ಶಾಸಕ ಕುಣಿಗಲ್ ಶಾಸಕ ಡಾ.ರಂಗನಾಥ್ ಕೂಡಾ ವಿದ್ಯುತ್ ಸಮಸ್ಯೆ ಅನುಭವಿಸಿದ್ದರು. ಸೋಮವಾರ ಸಂಜೆ ಅಮೃತ್ ಯೋಜನೆ ಅನುಷ್ಠಾನ ನಿಟ್ಟಿನಲ್ಲಿ ಶಾಸಕರು, ಪುರಸಭೆ ಸದಸ್ಯರ ಸಭೆ ನಡೆಸುತ್ತಿದ್ದರು. ಈ ಸಭೆಯ ಆರಂಭದಲ್ಲೇ ವಿದ್ಯುತ್ ಕೈ ಕೊಟ್ಟಿತ್ತು.
ಪುರಸಭೆಯಲ್ಲಿ ಪರ್ಯಾಯ ವ್ಯವಸ್ಥೆ ಇಲ್ಲದ ಕಾರಣ ಸಿಬ್ಬಂದಿ ಮೊಬೈಲ್ ಟಾರ್ಚ್ ಆನ್ ಮಾಡಿ ಶಾಸಕರ ಮುಂದೆ ಹಿಡಿದು ಸಭೆ ನಡೆಸಲು ಅನುವು ಮಾಡಿಕೊಟ್ಟರು. ಅಘೋಷಿತ ಲೋಡ್ ಶೆಡ್ಡಿಂಗ್ ಜನಸಾಮಾನ್ಯರ ನಿತ್ಯದ ಜೀವನಕ್ಕೆ ತೊಂದರೆಯಾಗುತ್ತಿದೆ. ಅಲ್ಲದೇ, ಆಡಳಿತದ ಮೇಲೂ ಪರಿಣಾಮ ಬೀರುತ್ತಿದೆ.
ಇದನ್ನೂ ಓದಿ : ಜನತಾ ದರ್ಶನಕ್ಕೆ ಸರ್ಕಾರಿ ಬಸ್ನಲ್ಲಿ ಟಿಕೆಟ್ ಪಡೆದು ಪ್ರಯಾಣಿಸಿದ ಉತ್ತರ ಕನ್ನಡ ಜಿಲ್ಲಾಧಿಕಾರಿ