2024ರ ಲೋಕಸಭೆ ಚುನಾವಣೆಯಲ್ಲಿ ತಮ್ಮ ಬೆಂಬಲ ಯಾವ ಪಕ್ಷಕ್ಕೆ ಎಂದು ತಿಳಿಸಿದ ದೇವೇಗೌಡರು - ಕರ್ನಾಟಕ ವಿಧಾನಸಭೆ ಚುನಾವಣೆ 2023
🎬 Watch Now: Feature Video
ಬೆಂಗಳೂರು: ಸಧ್ಯ ರಾಜದಲ್ಲಿ ಚುನವಾಣೆ ಕಾವು ಜೋರಾಗಿದ್ದು ಮೂರು ಪಕ್ಷಗಳ ನಡುವೆ ಅಧಿಕಾರದ ಗದ್ದುಗೆಗೆರಲು ಪೈಪೋಟಿ ಏರ್ಪಟ್ಟಿದೆ. ಒಂದೆಡೆ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿಯ ಕೇಂದ್ರ ನಾಯಕರು ರಾಜ್ಯಕ್ಕೆ ಭೇಟಿ ನೀಡಿ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ನಡೆಸಿ ಮತದಾರರ ಸೆಳೆಯುವ ಕಸರತ್ತು ನಡೆಸಿದ್ದಾರೆ. ಮತ್ತೊಂ ದೆಡೆ ಪ್ರಾದೇಶಿಕ ಪಕ್ಷವಾಗಿರುವ ಜೆಡಿಎಸ್ ಕೂಡ ಈ ಬಾರಿ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆರಲು ಶತಾಯಗತಾಯ ಪ್ರಯತ್ನ ನಡೆಸುತ್ತಿದೆ. ಈಗಾಗಲೇ ಪಂಚರತ್ನ ರಥಾಯಾತ್ರೆ ಮೂಲಕ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ ತೆರಳಿ ಜೆಡಿಎಸ್ ಯೋಜನೆಗಳನ್ನು ಮನೆಮನೆಗೆ ತಲುಪಿಸಿದ್ದು, ಈ ಮೂಲಕ ಮತದಾರರನ್ನು ತನ್ನತ್ತ ಸೆಳೆಯುವ ಕಾರ್ಯ ಮಾಡಿದೆ.
ಇದರ ಮಧ್ಯೆ 2024ರ ಲೋಕಸಭೆ ಚುನಾವಣೆಗೆ ಯಾವ ಪಕ್ಷಕ್ಕೆ ತಮ್ಮ ಬೆಂಬಲ ಎನ್ನುವುದನ್ನು ಜೆಡಿಎಸ್ ಮುಖ್ಯಸ್ಥ ಹಾಗೂ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ತಿಳಿಸಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಗೆ ಎಡ ಪಕ್ಷಗಳಿಗೆ ತಮ್ಮ ಬೆಂಬಲ ಎಂದು ಮಾಧ್ಯಮಕ್ಕೆ ದೇವೇಗೌಡ ತಿಳಿಸಿದ್ದಾರೆ.
ಇದನ್ನೂ ಓದಿ: ಸಿದ್ದಲಿಂಗೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಾಣಿಸಿಕೊಂಡ ಜಿ ಪರಮೇಶ್ವರ್ - ಬಿ ವೈ ವಿಜಯೇಂದ್ರ