ಕೆರೆಗಳ ಅಭಿವೃದ್ಧಿ & ಸಂರಕ್ಷಣೆಗೆ ಮುಂದಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ - ಕೆರೆಗಳ ಸಂರಕ್ಷಣೆ
🎬 Watch Now: Feature Video
ಮಂಡ್ಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಇದೀಗ ಕೆರೆಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗೆ ಕಾರ್ಯಕ್ಕೆ ಮುಂದಾಗಿದೆ. ಮಂಡ್ಯ ತಾಲೂಕು ಪುಟ್ಟಿಕೊಪ್ಪಲು ಗ್ರಾಮದಲ್ಲಿ 474ನೇ ನಮ್ಮೂರು, ನಮ್ಮ ಕೆರೆ ಹೂಳೆತ್ತುವ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಯಿತು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಸಮುದಾಯ ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಆನಂದ್ ಅವರು ಕೆರೆ ಹೂಳೆತ್ತುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಜೆಸಿಬಿ ಹಾಗೂ ಟ್ಯ್ರಾಕ್ಟರ್ ಮೂಲಕ ಹೂಳೆತ್ತಲಾಗುತ್ತಿದೆ. ಕೆರೆ ಪರಿಶೀಲನೆ ನಡೆಸಿ ಬಳಿಕ ಮಾತನಾಡಿದ ಆನಂದ್, "ಕೆರೆಗಳು ಅಭಿವೃದ್ಧಿಯಾಗಬೇಕು. ಕೆರೆ ಅಭಿವೃದ್ಧಿಯಿಂದ ರೈತರಿಗೆ ಅನುಕೂಲವಾಗುತ್ತದೆ. ಮಳೆ ನೀರನ್ನು ಸಂಗ್ರಹಿಸಿಟ್ಟುಕೊಂಡರೆ ನಮಗೆ ಉಪಯೋಗಕ್ಕೆ ಬರುತ್ತದೆ. ಹಾಗಾಗಿ ನಮ್ಮ ಸಂಸ್ಥೆ ಕೆರೆ ಅಭಿವೃದ್ಧಿಗೆ ಮುಂದಾಗಿದೆ" ಎಂದು ತಿಳಿಸಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಕಾರ್ಯಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದರು. ಈ ವೇಳೆ, ಕೃಷಿ ಮೇಲ್ವಿಚಾರಕ ನವೀನ್, ಜಿಲ್ಲಾ ನಿರ್ದೇಶಕಿ ಚೇತನಾ, ಯೋಜಾನಾಧಿಕಾರಿ ಮಮತಾ, ಕೆರೆ ಅಭಿಯಂತರ ಸುರೇಶ್, ಪುಷ್ಪರಾಜ್, ಶಿವಕುಮಾರ್ ಸೇರಿದಂತೆ ಹಲವರು ಭಾಗಿಯಾಗಿದ್ದರು.