ಭಾಷಣಕ್ಕೆ ಅಡ್ಡಿಪಡಿಸಿದ ಕಾರ್ಯಕರ್ತನ ವಿರುದ್ಧ ಗರಂ ಆದ ಆಯನೂರು ಮಂಜುನಾಥ್
🎬 Watch Now: Feature Video
ಶಿವಮೊಗ್ಗ: ತಮ್ಮ ಭಾಷಣದ ವೇಳೆ ಅಡ್ಡಿಪಡಿಸಿದ ಕಾರ್ಯಕರ್ತನ ವಿರುದ್ಧ ವಿಧಾನ ಪರಿಷತ್ ಮಾಜಿ ಸದಸ್ಯ ಆಯನೂರು ಮಂಜುನಾಥ್ ಗರಂ ಆಗಿರುವ ಘಟನೆ ಇಂದು ನಗರದಲ್ಲಿ ನಡೆದಿದೆ. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕರಾದ ಶಾರದ ಪೂರ್ಯನಾಯ್ಕ ಅವರ ನೂತನ ಕಚೇರಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಘಟನೆ ನಡೆದಿದೆ.
ನಗರದ ನೆಹರು ರಸ್ತೆಯ ಮಹಾನಗರ ಪಾಲಿಕೆ ಕಟ್ಟಡದಲ್ಲಿ ಶಾಸಕರ ಕಚೇರಿಯ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ವೇದಿಕೆಯಲ್ಲಿ ಆಯನೂರು ಮಂಜುನಾಥ್ ಅವರು ಭಾಷಣ ಮಾಡುವಾಗ ಜೆಡಿಎಸ್ ಕಾರ್ಯಕರ್ತನೋರ್ವ ಇನ್ನೂ ಬಹಳ ಜನ ಮಾತನಾಡುವವರಿದ್ದಾರೆ ಎಂದು ಹೇಳಿದ್ದಾನೆ. ಈ ವೇಳೆ ಗರಂ ಆದ ಆಯನೂರು ಮಂಜುನಾಥ್, ಬಹಳ ಜನ ಮಾತನಾಡುವವರಿದ್ದಾರೆ ಅಂದ್ರೆ, ನಾನು ಭಾಷಣ ನಿಲ್ಲಿಸಬೇಕೆಂಬ ಅರ್ಥ ಎಂದು ತಾನೇ. ನಾನು ಭಾಷಣ ನಿಲ್ಲಿಸುತ್ತೇನೆ. ನೀನು ಬಂದು ಭಾಷಣ ಮಾಡು ಎಂದು ಮೈಕ್ ನೀಡಲು ಮುಂದಾದರು. ಈ ವೇಳೆ ಶಾಸಕಿ ಶಾರದ ಪೂರ್ಯನಾಯ್ಕ ಸೇರಿದಂತೆ ಇತರರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು.
ಬಳಿಕ ಮಾತನಾಡಿದ ಶಾಸಕಿ ಶಾರದ ಪೂರ್ಯನಾಯ್ಕ, ಆಯನೂರು ಮಂಜುನಾಥ್ ಅವರು ರಾಜ್ಯ ಕಂಡ ಉತ್ತಮ ರಾಜಕಾರಣಿ. ಮುಂಬರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಎಪಿಎಂಸಿ ಚುನಾವಣೆಯಲ್ಲಿ ಅವರ ಮಾರ್ಗದರ್ಶನ ನಮಗೆ ಬೇಕಾಗಿದೆ. ಇಂದು ನಡೆದ ಘಟನೆಗೆ ನಾನು ಕ್ಷಮೆ ಕೇಳುತ್ತೇನೆ ಎಂದರು. ಕಾರ್ಯಕ್ರಮದಲ್ಲಿ ಜಿಲ್ಲಾ ಜೆಡಿಎಸ್ ಮುಖಂಡರು ಉಪಸ್ಥಿತರಿದ್ದರು.
ಇದನ್ನೂ ಓದಿ : ವಿದ್ಯುತ್ ಬಿಲ್ ಕಟ್ಟಲು ಗ್ರಾಮಸ್ಥರ ಹಿಂದೇಟು: ಬಿಲ್ ಕಲೆಕ್ಟರ್ ಹಾಗೂ ಗ್ರಾಮಸ್ಥರ ಮಧ್ಯೆ ಮಾತಿನ ಚಕಮಕಿ