ಸಿಎಂ ಆಯ್ಕೆ ಬಿಕ್ಕಟ್ಟು: ದೆಹಲಿಗೆ ಬಂದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್
🎬 Watch Now: Feature Video
ನವದೆಹಲಿ: ಮುಖ್ಯಮಂತ್ರಿ ಆಯ್ಕೆ ಬಿಕ್ಕಟ್ಟು ಶಮನಕ್ಕಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಇಂದು ದೆಹಲಿಗೆ ಆಗಮಿಸಿದ್ದಾರೆ. ಇಲ್ಲಿನ ಇಂದಿರಾ ಗಾಂಧಿ ವಿಮಾನ ನಿಲ್ದಾಣದಿಂದ ಅವರು ಬೆಂಬಲಿಗರ ಸಮೇತ ಬಿಗಿ ಭದ್ರತೆಯಲ್ಲಿ ಕಾಂಗ್ರೆಸ್ ಕಚೇರಿಯತ್ತ ತೆರಳಿದರು. ನಿನ್ನೆಯೇ ಅವರು ದೆಹಲಿಗೆ ಬರಲು ಹೈಕಮಾಂಡ್ ಸೂಚನೆ ನೀಡಿತ್ತು. ಆದರೆ, ಅನಾರೋಗ್ಯದ ಕಾರಣ ಅವರು ಭೇಟಿಯನ್ನು ರದ್ದು ಮಾಡಿದ್ದರು.
ಇತ್ತೀಚೆಗೆ ಮುಗಿದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಯಶ ಸಾಧಿಸಿ 135 ಸ್ಥಾನಗಳನ್ನು ಗೆದ್ದುಕೊಂಡಿರುವ ಕಾಂಗ್ರೆಸ್ ಸಿಎಂ ಆಯ್ಕೆಯ ಗೊಂದಲದಲ್ಲಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮಧ್ಯೆ ಹುದ್ದೆಗಾಗಿ ಪ್ರಬಲ ಪೈಪೋಟಿ ನಡೆಯುತ್ತಿದೆ.
ಈಗಾಗಲೇ ಮಾಜಿ ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲಿ ಠಿಕಾಣಿ ಹೂಡಿದ್ದು, ಸಿಎಂ ಹುದ್ದೆಗಾಗಿ ಹೈಕಮಾಂಡ್ ಎದುರು ಲಾಬಿ ನಡೆಸುತ್ತಿದ್ದಾರೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ನೇತೃತ್ವದಲ್ಲಿ ಈ ಸಮಸ್ಯೆ ಪರಿಹಾರಕ್ಕೆ ಇಂದು ಸಭೆ ನಡೆಯಲಿದ್ದು, ಸಿಎಂ ಆಕಾಂಕ್ಷಿಗಳಿಬ್ಬರೂ ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ: ಮಕ್ಕಳಿಗೆ ಏನು ಕೊಡಬೇಕೆಂದು ತಾಯಿಗೆ ಗೊತ್ತಿದೆ: ನಾನೊಬ್ಬನೇ ದೆಹಲಿಗೆ ಹೋಗುತ್ತಿದ್ದೇನೆ: ಡಿಕೆಶಿ