ಕಾಂಗ್ರೆಸ್ನಲ್ಲಿ ಮುಂದುವರೆದ ಸಿಎಂ ಘೋಷಣೆ ಬಿಕ್ಕಟ್ಟು: ರಾಮನಗರದಲ್ಲಿ ಬಿಗಿ ಭದ್ರತೆ - ಈಟಿವಿ ಭಾರತ ಕನ್ನಡ
🎬 Watch Now: Feature Video

ರಾಮನಗರ : ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಮುಖ್ಯಮಂತ್ರಿ ಸ್ಥಾನ ಬಹುತೇಕ ಖಚಿತವಾಗಬಹುದೆಂಬ ಸುದ್ದಿ ಹರಡುತ್ತಿದ್ದಂತೆ ಮುಂಜಾಗ್ರತಾ ಕ್ರಮವಾಗಿ ರಾಮನಗರದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಎಂದು ಕಾಂಗ್ರೆಸ್ ಹೈಕಮಾಂಡ್ ಅಧಿಕೃತ ಘೋಷಣೆ ಮಾಡುವುದೊಂದೇ ಬಾಕಿ ಎಂಬ ಸುದ್ದಿ ಹರಡಿದ ಬೆನ್ನಲ್ಲೆ ಡಿಕೆ ಶಿವಕುಮಾರ್ ಸ್ವಕ್ಷೇತ್ರ ರಾಮನಗರದಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಕೊನೆ ಕ್ಷಣದವರೆಗೂ ಸಿಎಂ ಸ್ಥಾನಕ್ಕೆ ತೀವ್ರ ಪೈಪೋಟಿ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಬಹುತೇಕ ಸಿಎಂ ಸ್ಥಾನ ಕೈತಪ್ಪಬಹುದೆಂಬ ಶಂಕೆಯಿಂದಾಗಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
ಇನ್ನು, ಡಿಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಕೈತಪ್ಪಿದ್ದರಿಂದ ಅವರ ಅಭಿಮಾನಿಗಳು ಪ್ರತಿಭಟನೆ ನಡೆಸುವ ಸಾಧ್ಯತೆಗಳು ಇವೆ. ಈ ಹಿನ್ನೆಲೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚಿಸಲಾಗಿದೆ ಎಂದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ರಾಮನಗರದ ಐಜೂರು ವೃತ್ತದಲ್ಲಿ ಒಂದು ಕೆಎಸ್ಆರ್ಪಿ ತುಕಡಿ, ಒಬ್ಬರು ಸಬ್ ಇನ್ಸ್ಪೆಕ್ಟರ್ ಹಾಗೂ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಇದನ್ನೂ ಓದಿ : ಸಿಎಂ ಸ್ಥಾನಕ್ಕಾಗಿ ಸಿದ್ದರಾಮಯ್ಯ ಬ್ಲಾಕ್ ಮೇಲ್ ತಂತ್ರ ಎಂದ ಛಲವಾದಿ ನಾರಾಯಣಸ್ವಾಮಿ ಆರೋಪ.