ದೇವರ ಮೊರೆ ಹೋದ ಡಿ.ಕೆ.ಶಿವಕುಮಾರ್: ಈಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ
🎬 Watch Now: Feature Video
ರಾಮನಗರ: ಚುನಾವಣೆ ಹೊಸ್ತಿಲಲ್ಲಿ ರಾಜಕಾರಣಿಗಳು ದೇವರ ಮೊರೆ ಹೋಗುವುದು ಸರ್ವೇ ಸಾಮಾನ್ಯ. ಅದರಲೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮೊದಲಿನಿಂದಲೂ ದೈವ ಭಕ್ತರು. ಈ ಹಿನ್ನೆಲೆ ಇಂದು ಬೆಳ್ಳಂಬೆಳಗ್ಗೆ ಸ್ವ-ಕ್ಷೇತ್ರ ಕನಕಪುರ ತಾಲೂಕಿನಲ್ಲಿರುವ ಮಾಳಗಾಳು ಗ್ರಾಮದ ಈಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಅರ್ಕಾವತಿ ನದಿಯಲ್ಲಿ ಸ್ನಾನ ಮಾಡಿ, ಮಡಿ ಬಟ್ಟೆಯಲ್ಲಿ ದೇವಸ್ಥಾನಕ್ಕೆ ತೆರಳಿದರು. ಬಳಿಕ ಸನ್ನಿಧಿಯಲ್ಲಿ ತಣ್ಣೀರಿನಲ್ಲಿ ಸ್ನಾನ ಮಾಡಿ ವಿಶೇಷ ಪೂಜೆ ನೆರವೇರಿಸಿ ಈಶ್ವರನ ಆಶೀರ್ವಾದ ಪಡೆದುಕೊಂಡರು. ಇದೇ ಸಂದರ್ಭದಲ್ಲಿ ಮಾಳಗಾಳು ಗ್ರಾಮಸ್ಥರಾದ ನಿವೃತ್ತ ಪೊಲೀಸ್ ಅಧಿಕಾರಿ ಶ್ರೀನಿವಾಸ್ ಮಂಜುನಾಥ್, ಕಾಂಗ್ರೆಸ್ ಪತ್ರಿಕಾ ವಕ್ತಾರ ಮರಸಪ್ಪ ರವಿ ಸೇರಿ ಹಲವರು ಇದ್ದರು. ಬಳಿಕ ಬೆಂಗಳೂರಿಗೆ ಆಗಮಿಸಿ ಸುದ್ದಿಗೋಷ್ಠಿ ನಡೆಸಿದರು.
ನಾಮಪತ್ರ ಅಂಗೀಕಾರ: ಕನಕಪುರ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಡಿ.ಕೆ.ಶಿವಕುಮಾರ್ ಅವರ ನಾಮಪತ್ರವನ್ನು ಚುನಾವಣಾಧಿಕಾರಿಗಳು ಶುಕ್ರವಾರ ಅಂಗೀಕರಿಸಿದ್ದಾರೆ. ಈ ಮೂಲಕ ನಾಮಪತ್ರ ತಿರಸ್ಕೃತವಾಗುವ ಭೀತಿಯಲ್ಲಿದ್ದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ನಿರಾಳರಾಗಿದ್ದಾರೆ.
ಇದನ್ನೂ ಓದಿ: ಕನಕಪುರದಿಂದ ಸ್ಪರ್ಧಿಸಿರುವ ಡಿ ಕೆ ಶಿವಕುಮಾರ್ ನಾಮಪತ್ರ ಅಂಗೀಕಾರ