ಸಿಎಂ ಆಯ್ಕೆ ವಿಚಾರದಲ್ಲಿ ನನಗೆ ಸಂಪೂರ್ಣ ಸಂತೋಷವಿಲ್ಲ: ಡಿ.ಕೆ.ಸುರೇಶ್ - DK Suresh spoke about DCM to DKS
🎬 Watch Now: Feature Video
ನವದೆಹಲಿ : ಕಳೆದ ಮೂರ್ನಾಲ್ಕು ದಿನಗಳಿಂದ ಕಾಂಗ್ರೆಸ್‌ಗೆ ಕಗ್ಗಂಟಾಗಿ ಪರಿಣಮಿಸಿದ್ದ ಸಿಎಂ ಆಯ್ಕೆ ವಿಚಾರ ಬಹುತೇಕ ಸುಖಾಂತ್ಯಗೊಂಡಂತೆ ಕಾಣುತ್ತಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಸಿಎಂ ಆಗಿಯೂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಉಪಮುಖ್ಯಮಂತ್ರಿಯಾಗಿಯೂ ಮಾಡಲಾಗುತ್ತದೆ ಎಂದು ಹೇಳಲಾಗಿದೆ. ಕಳೆದ ಕೆಲವು ದಿನಗಳಿಂದ ಆಯ್ಕೆ ಕುರಿತು ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ನಡೆಯುತ್ತಿತ್ತು. ಈ ಸಂಬಂಧ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಪಕ್ಷದ ವರಿಷ್ಠರೊಂದಿಗೆ ಮಾತುಕತೆ ನಡೆಸಿದ್ದರು. ಇದೀಗ ಬಹುತೇಕ ಸಿಎಂ ಆಯ್ಕೆ ವಿಚಾರ ಅಂತಿಮ ಘಟ್ಟ ತಲುಪಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.
ಡಿಕೆಶಿಗೆ ಸಿಎಂ ಸ್ಥಾನ ತಪ್ಪಿದ ವಿಚಾರವಾಗಿ ಪ್ರತಿಕ್ರಿಯಿಸಿದ ಕಾಂಗ್ರೆಸ್ ಸಂಸದ ಹಾಗು ಸಹೋದರ ಡಿ.ಕೆ. ಸುರೇಶ್ ಮಾತನಾಡಿ, ನನಗೆ ಪೂರ್ತಿ ಸಂತೋಷವಾಗಿಲ್ಲ. ಆದರೆ ಕರ್ನಾಟಕದ ಹಿತದೃಷ್ಟಿಯಿಂದ ನಾವು ನಮ್ಮ ಬದ್ಧತೆಯನ್ನು ಪೂರೈಸಲು ಬಯಸಿದ್ದೇವೆ. ಅದಕ್ಕಾಗಿಯೇ ಡಿ.ಕೆ.ಶಿವಕುಮಾರ್ ಒಪ್ಪಿಕೊಂಡಿದ್ದಾರೆ. ಭವಿಷ್ಯದಲ್ಲಿ ಏನಾಗುತ್ತದೆ ಎಂಬುದನ್ನು ಕಾದು ನೋಡುತ್ತೇವೆ. ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಹುದ್ದೆ ಸಿಗುತ್ತದೆ ಎಂದು ಭಾವಿಸಿದ್ದೆ. ಆದರೆ ಆಗಲಿಲ್ಲ. ಮುಂದೆ ಕಾದು ನೋಡೋಣ ಎಂದು ಹೇಳಿದರು.
ಇದನ್ನೂ ಓದಿ : 'ಹೈಕಮಾಂಡ್ ಹೇಳಿದ್ದನ್ನು ನಾವು ಕೇಳಬೇಕು': ದೆಹಲಿಯಲ್ಲಿ ಡಿ.ಕೆ.ಶಿವಕುಮಾರ್ ಹೇಳಿಕೆ