ಶ್ರೀ ಕಾಡಸಿದ್ದೇಶ್ವರ ಮಠದ ಅಜ್ಜಯ್ಯನ ದರ್ಶನ ಪಡೆದ ನೂತನ ಡಿಸಿಎಂ ಡಿ. ಕೆ. ಶಿವಕುಮಾರ್ - etv bharat kannada
🎬 Watch Now: Feature Video
ತುಮಕೂರು: ತಿಪಟೂರು ತಾಲೂಕಿನ ನೊಣವಿನಕೆರೆಯಲ್ಲಿರುವ ಶ್ರೀ ಕಾಡಸಿದ್ದೇಶ್ವರ ಮಠಕ್ಕೆ ಡಿಸಿಎಂ ಡಿ ಕೆ ಶಿವಕುಮಾರ್ ಭೇಟಿ ನೀಡಿ ಅಜ್ಜಯ್ಯನ ದರ್ಶನ ಪಡೆದರು. ನಿನ್ನೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ಡಿ ಕೆ ಶಿವಕುಮಾರ್ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರು. ಡಿಸಿಎಂ ಆದ ಬಳಿಕ ಇಂದು ಮೊದಲ ಬಾರಿಗೆ ಶ್ರೀ ಕಾಡಸಿದ್ದೇಶ್ವರ ಮಠಕ್ಕೆ ಡಿಕೆಶಿ ಭೇಟಿ ನೀಡಿದರು.
ಶ್ರೀ ಕರಿವೃಷಭ ದೇಶಿಕೇಂದ್ರ ಸ್ವಾಮೀಜಿಗಳ ನೇತೃತ್ವದಲ್ಲಿ ಡಿ ಕೆ ಶಿವಕುಮಾರ್ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದರು. ಚುನಾವಣೆಗೂ ಮೊದಲು ಹಾಗೂ ನಂತರ ನಾಲ್ಕೈದು ಬಾರಿ ಮಠಕ್ಕೆ ಭೇಟಿ ನೀಡಿ ಅಜ್ಜಯ್ಯನ ದರ್ಶನ ಪಡೆದು ಪೂಜೆ ಸಲ್ಲಿಸಿದ್ದರು. ಸದ್ಯ ಖಾತೆ ಹಂಚಿಕೆಗೂ ಮೊದಲು ಕಾಡಸಿದ್ದೇಶ್ವರ ಮಠಕ್ಕೆ ಆಗಮಿಸಿದ ಡಿ. ಕೆ. ಶಿವಕುಮಾರ್ ಪ್ರಬಲ ಖಾತೆಗಳ ಮೇಲೆ ಕಣ್ಣಿಟ್ಟಿದ್ದು, ಇಂದು ಅಜ್ಜಯ್ಯನ ಆಶೀರ್ವಾದ ಪಡೆದರು. ನಂತರ ಡಿ ಕೆ ಶಿವಕುಮಾರ್ ಅಲ್ಲಿಂದ ಆದಿಚುಂಚನಗಿರಿ ಮಠಕ್ಕೆ ತೆರಳಿದರು.
ಇದನ್ನೂ ಓದಿ:'ಅಧಿಕಾರಕ್ಕಾಗಿ ನನ್ನ ಮನೆ, ಸಿದ್ದರಾಮಯ್ಯರ ಮನೆ ಎಂದು ಸುತ್ತಬೇಡಿ': ಡಿಕೆಶಿ ಖಡಕ್ ಸೂಚನೆ