ಹುನಗುಂದ ಕ್ಷೇತ್ರದಲ್ಲಿ ಜನರ ಒಲವು ಬಿಜೆಪಿ ಪರ ಇದೆ: ದೊಡ್ಡನಗೌಡ ಪಾಟೀಲ್​ - ಈಟಿವಿ ಭಾರತ ಕರ್ನಾಟಕ

🎬 Watch Now: Feature Video

thumbnail

By

Published : Apr 25, 2023, 8:09 PM IST

ಬಾಗಲಕೋಟೆ: ಹುನಗುಂದ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದೊಂದಿಗೆ ಪೈಪೋಟಿಯಾಗಿದೆ, ಕೆಆರ್​ಪಿಪಿ ಪಕ್ಷ ಆಟಕ್ಕೆ ಉಂಟು ಲೆಕ್ಕಕ್ಕೆ ಇಲ್ಲ. ಈ ಬಾರಿ ಸುಮಾರು 25 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಜಯ ಗಳಿಸುತ್ತೇನೆ ಎಂದು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ದೊಡ್ಡನಗೌಡ ಪಾಟೀಲ್​ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

'ಈಟಿವಿ ಭಾರತ'ದೊಂದಿಗೆ ಮಾತನಾಡಿದ ಅವರು, ಪ್ರಚಾರ ಕಾರ್ಯ ಗ್ರಾಮೀಣ ಹಾಗೂ ನಗರ ಭಾಗದಲ್ಲಿ ನಡೆದಿದೆ. ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಜ್ಯದಲ್ಲಿ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಮಾಡಿದ ಅಭಿವೃದ್ಧಿ ಕಾರ್ಯಗಳು ಹಾಗೂ ನಾನು ಕ್ಷೇತ್ರದಲ್ಲಿ ಮಾಡಿದ ಕೆಲಸದ ಕುರಿತು ಅಭಿವೃದ್ಧಿ ಮಂತ್ರವನ್ನು ಇಟ್ಟುಕೊಂಡು ಮಾತಯಾಚನೆ ಮಾಡುತ್ತೇನೆ ಎಂದರು.

ಹಿಂದಿನ ಕಾಂಗ್ರೆಸ್ ಪಕ್ಷದ ಅಧಿಕಾರಾವಧಿಯಲ್ಲಿ ಸುಮಾರು 800 ಕೋಟಿ ರೂ. ವೆಚ್ಚದಲ್ಲಿ ಹನಿ ನೀರಾವರಿ ಯೋಜನೆ ಮಾಡಲಾಗಿತ್ತು. ಆದರೆ ಇದರಲ್ಲಿ ಅವ್ಯವಹಾರ ನಡೆದಿದ್ದು, ಸಂಪೂರ್ಣ ಹಾಳಾಗಿದೆ. ಮುಂದೆ ಮತ್ತೆ ನಮ್ಮ ಸರ್ಕಾರ ಬಂದಾಗ ತನಿಖೆ ಮಾಡಲು ಸಮಿತಿ ರಚನೆ ಮಾಡಿ, ಏನು ಮಾಡಬೇಕು ಎಂಬುದನ್ನು ತಜ್ಞರಿಂದ ಮಾಹಿತಿ ತೆಗೆದುಕೊಳ್ಳಲಾಗುವುದು. ವಿಜಯಾನಂದ ಕಾಶಪ್ಪನವರ ಶಾಸಕರಾಗಿದ್ದ ಸಮಯದಲ್ಲಿ ಅವ್ಯವಹಾರ ಮಾಡಿದ್ದಾರೆ ಎಂದು ಆರೋಪಿಸಿದರು.

ಇತ್ತೀಚೆಗೆ ಬಸವ ಜಯಂತಿ ಅಂಗವಾಗಿ ಕೂಡಲಸಂಗಮಕ್ಕೆ ರಾಹುಲ್ ಗಾಂಧಿ ಭೇಟಿ ಕುರಿತು ಪ್ರತಿಕ್ರಿಯಿಸಿ, ರಾಹುಲ್ ಗಾಂಧಿ ಬಂದು ಹೋದ ಬಳಿಕ ಲಿಂಗಾಯತ ಮತಗಳ ಮೇಲೆ ಏನು ಪರಿಣಾಮ ಆಗಲ್ಲ. ನೇಕಾರರ ಸಮಸ್ಯೆ ಸೇರಿದಂತೆ ಹುನಗುಂದ ಮತಕ್ಷೇತ್ರದಲ್ಲಿ ಈ ನಾಲ್ಕು ವರ್ಷ ಸಾಕಷ್ಟು ಅಭಿವೃದ್ಧಿ ಮಾಡಿದ್ದೇವೆ. ರಾಜ್ಯ ಹಾಗೂ ಕೇಂದ್ರ ಸರ್ಕಾರ ಮಾಡಿರುವ ಸಾಧನೆಯಿಂದಾಗಿ ಮತದಾರರು ಈ ಬಾರಿ ಬಿಜೆಪಿ ಪಕ್ಷಕ್ಕೆ ಹೆಚ್ಚು ಒಲವು ತೋರಿಸುತ್ತಿದ್ದಾರೆ ಎಂದು ದೊಡ್ಡನಗೌಡ ಪಾಟೀಲ್​ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು.

ಇದನ್ನೂ ಓದಿ:ಹುನಗುಂದ ಕ್ಷೇತ್ರದಲ್ಲಿ ಈ ಬಾರಿ ಗೆಲುವು ನಂದೇ: ಎಸ್​ ಆರ್ ನವಲಿ ಹಿರೇಮಠ

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.