ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ಸಂಭ್ರಮ.. ಮೆರವಣಿಗೆಯಲ್ಲಿ 15 ಸಾವಿರಕ್ಕೂ ಹೆಚ್ಚು ಜನರು ಭಾಗಿ - ಐಜಿ ರಸ್ತೆಯಲ್ಲಿ ಮೆರವಣಿಗೆ
🎬 Watch Now: Feature Video


Published : Sep 28, 2023, 7:45 PM IST
ಚಿಕ್ಕಮಗಳೂರು : ಜಿಲ್ಲೆಯಲ್ಲಿ ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ 1498 ನೇ ಜನ್ಮದಿನದ ಅಂಗವಾಗಿ ಮುಸ್ಲಿಂ ರಿಂದ ಈದ್ ಮಿಲಾದ್ ಹಬ್ಬ ತುಂಬಾ ಸಂಭ್ರಮ ಮತ್ತು ಸಡಗರದಿಂದ ಆಚರಣೆ ಮಾಡಲಾಯಿತು. ಇಂದು ನಗರದಲ್ಲಿ 15 ಸಾವಿರಕ್ಕೂ ಅಧಿಕ ಮುಸ್ಲಿಂ ಬಾಂಧವರು ಬೃಹತ್ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ಮೊದಲು ಎನ್ಎಂಸಿ ವೃತ್ತದಿಂದ ಪ್ರಾರಂಭವಾದ ಮೆರವಣಿಗೆ ಎಂಜಿ ರಸ್ತೆಯ ಮೂಲಕ ಸಾಗಿ ತೊಗರಿಹಂಕಲ್ ಸರ್ಕಲ್ ತಲುಪಿ ಐ ಜಿ ರಸ್ತೆಯ ಮೂಲಕ ಹನುಮಂತಪ್ಪ ವೃತ್ತ ತಲುಪಿತು. ನಂತರ ಮತ್ತೆ ಎಂ ಜಿ ರಸ್ತೆಯ ಮೂಲಕ ಸಾಗಿ ಐಜಿ ರಸ್ತೆಯಲ್ಲಿ ಮೆರವಣಿಗೆಯನ್ನು ಅಂತಿಮಗೊಳಿಸಲಾಯಿತು. ಇದೇ ಸಂದರ್ಭದಲ್ಲಿ ಯುವಕರು ಕುಣಿದು ಕುಪ್ಪಳಿಸಿದರು. ಈ ವೇಳೆ ವಿವಿಧ ಸಾಂಸ್ಕೃತಿಕ ಕಲೆಗಳು ಕೂಡ ಅನಾವರಣಗೊಂಡಿದ್ದು ವಿಶೇಷವಾಗಿತ್ತು.
ಮೆರವಣಿಗೆ ನಡೆಯುವಾಗ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಪೊಲೀಸರಿಂದ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಮೆರವಣಿಗೆಯಲ್ಲಿ 15 ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಜನರು ಭಾಗಿಯಾಗುವ ಹಿನ್ನೆಲೆ ನಗರದ ಸೂಕ್ಷ್ಮ, ಅತಿಸೂಕ್ಷ್ಮ, ಪ್ರದೇಶದಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದರು. ನಗರದ ಪ್ರಮುಖ ಸ್ಥಳಗಳಲ್ಲಿ ಸಿಸಿಟಿವಿ ಕಣ್ಗಾವಲು ಹಾಕಿದ್ದು, ರಸ್ತೆಯುದ್ದಕ್ಕೂ ಪೊಲೀಸರು ಗಸ್ತು ತಿರುಗೋದು ಸಾಮಾನ್ಯವಾಗಿತ್ತು.
ಇದನ್ನೂ ಓದಿ: ಬಳ್ಳಾರಿಯಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ.. ಮೆಕ್ಕಾ, ಮದೀನಾದ ಸ್ತಬ್ಧಚಿತ್ರ ಮೆರವಣಿಗೆ