ಡಿಸಿ, ಪೊಲೀಸ್ ವರಿಷ್ಠಾಧಿಕಾರಿ, ಮನೋವೈದ್ಯರಿಂದ ಚುನಾವಣಾ ಜಾಗೃತಿ
🎬 Watch Now: Feature Video
ಶಿವಮೊಗ್ಗ : ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತದಿಂದ ಮತದಾನ ಜಾಗೃತಿ ಹಮ್ಮಿಕೊಳ್ಳಲಾಗಿದೆ. ತಪ್ಪದೇ ಮತದಾನ ಮಾಡುವಂತೆ ಜಿಲ್ಲಾ ಚುನಾವಣಾ ರಾಯಭಾರಿಗಳು ಹಾಗೂ ಜಿಲ್ಲಾಡಳಿತದ ಅಧಿಕಾರಿಗಳು ವಿನಂತಿಸಿಕೊಂಡಿದ್ದಾರೆ.
ಶಿವಮೊಗ್ಗ ಜಿಲ್ಲಾ ಚುನಾವಣಾ ರಾಯಭಾರಿಗಳಾದ ಡಾ ಕೆ ಎನ್ ಶುಭ್ರತಾ ಅವರು ಮಾತನಾಡಿದ್ದು, ಮೇ 10ರಂದು ಸಾರ್ವತ್ರಿಕ ಚುನಾವಣೆ ಇರುವುದು ನಿಮ್ಮೆಲ್ಲರಿಗೂ ಗೊತ್ತೇ ಇದೆ. ಮತದಾನ ಎಂಬುದು ನಮ್ಮೆಲ್ಲರ ಹಕ್ಕು. ಆ ಹಕ್ಕನ್ನು ನಾವು ಚಲಾಯಿಸಬೇಕು ಎಂದಿದ್ದಾರೆ.
ಜಿಲ್ಲಾಧಿಕಾರಿ ಡಾ ಸೆಲ್ವಮಣಿ ಅವರು ಮಾತನಾಡಿದ್ದು, ಮುಂಬರುವ ವಿಧನಾಸಭಾ ಚುನಾವಣೆಯಲ್ಲಿ ಮತದಾನ ಮಾಡುವಂತೆ ನಾನು ಎಲ್ಲರಲ್ಲಿಯೂ ಕೂಡಾ ವಿನಂತಿ ಮಾಡಿಕೊಳ್ಳುತ್ತೇನೆ. ಈಗಲೂ ಕೂಡಾ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಸೇರಿಸಿಕೊಳ್ಳಬಹುದು ಎಂದಿದ್ದಾರೆ.
ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಅವರು ಮಾತನಾಡಿದ್ದು, ಕರ್ನಾಟಕದ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದೆ. 18 ವರ್ಷ ಮೇಲ್ಪಟ್ಟವರು ಎಲ್ಲರೂ ಕೂಡ ಬಂದು ಮತವನ್ನು ಚಲಾವಣೆ ಮಾಡಿ ಎಂದರು. ಅಪರ ಜಿಲ್ಲಾಧಿಕಾರಿ ಎಸ್ ಎಸ್ ಬಿರಾದರ್, ಮಹಾನಗರ ಪಾಲಿಕೆ ಆಯುಕ್ತರಾದ ಮಾಯಣ್ಣಗೌಡ ಅವರು ಜಿಲ್ಲೆಯ ಜನ ತಪ್ಪದೇ ಮತದಾನ ಮಾಡುವಂತೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ : ಬೆಂಗಳೂರು ನಗರ ವ್ಯಾಪ್ತಿಯ ವಿವಿಧ ಸ್ಥಳಗಳಲ್ಲಿ ಮತದಾನದ ಕುರಿತು ಜಾಗೃತಿ