ಬಾಗಲಕೋಟೆಯಲ್ಲಿ ಸಹೋದರರ ಸವಾಲ್; ಬೃಹತ್ ಮೆರವಣಿಗೆ ಮೂಲಕ ಶಕ್ತಿ ಪ್ರದರ್ಶನ - election news
🎬 Watch Now: Feature Video
ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಸಹೋದರರ ಮಧ್ಯೆ ಚುನಾವಣಾ ಸ್ಪರ್ಧೆ ಏರ್ಪಟ್ಟಿದೆ. ಇಲ್ಲಿ ಸಹೋದರರಿಬ್ಬರು ಪರಸ್ಪರ ತಮ್ಮ ಬಲ ಪ್ರದರ್ಶಿಸುತ್ತಿದ್ದಾರೆ. ಶಾಸಕ ವೀರಣ್ಣ ಚರಂತಿಮಠ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರೆ, ಸಹೋದರ ಮಲ್ಲಿಕಾರ್ಜುನ ಚರಂತಿಮಠ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.
ನಗರದಲ್ಲಿಂದು ವೀರಣ್ಣ ಚರಂತಿಮಠ ನೇತೃತ್ವದಲ್ಲಿ ಬೃಹತ್ ಮೆರವಣಿಗೆ ನಡೆಸುವ ಮೂಲಕ ಶಕ್ತಿ ಪ್ರದರ್ಶನ ನಡೆಯಿತು. ಬಸವೇಶ್ವರ ವಿದ್ಯಾವರ್ಧಕ ಸಂಘದ ಆವರಣದಿಂದ ಪ್ರಾರಂಭವಾದ ರೋಡ್ ಶೋ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಾಗಿತು. ಸಂಸದರಾದ ಪಿ.ಸಿ.ಗದ್ದಿಗೌಡರ, ಯಲ್ಲಪ್ಪ ಬೆಂಡಿಗೇರಿ, ಶಿವಾನಂದ ಟವಳಿ, ರಾಜು ನಾಯ್ಕ ಸೇರಿದಂತೆ ಇತರರು ಸಾಥ್ ನೀಡಿದರು.
ನಿನ್ನೆ ಬಂಡಾಯ ಅಭ್ಯರ್ಥಿ ಮಲ್ಲಿಕಾರ್ಜುನ ಚರಂತಿಮಠ ನಗರದಲ್ಲಿ ತಮ್ಮ ಬಲ ಪ್ರದರ್ಶಿಸಲು ಬೃಹತ್ ರೋಡ್ ಶೋ ಹಮ್ಮಿಕೊಂಡಿದ್ದರು. ಈ ಮೆರವಣಿಗೆಯಲ್ಲಿ ಯುವ ಮುಖಂಡ ಸಂತೋಷ ಹೋಕ್ರಾಣಿ, ಅಶೋಕ ಮುತ್ತಿನಮಠ, ಶಿವು ಮೇಲ್ನಾಡ ಸೇರಿದಂತೆ ಸಂಘ ಪರಿವಾರದ ಕೆಲ ಮುಖಂಡರು ಭಾಗವಹಿಸಿದ್ದರು.
ಬಾಗಲಕೋಟೆ ಮತಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ವೀರಣ್ಣ ಚರಂತಿಮಠ, ಬಂಡಾಯ ಅಭ್ಯರ್ಥಿ ಮಲ್ಲಿಕಾರ್ಜುನ ಚರಂತಿಮಠ ಸ್ಪರ್ಧಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಎಚ್.ವೈ.ಮೇಟಿ, ಜೆಡಿಎಸ್ ಅಭ್ಯರ್ಥಿಯಾಗಿ ಡಾ.ದೇವರಾಜ ಪಾಟೀಲ ಅಖಾಡದಲ್ಲಿದ್ದಾರೆ.
ಇದನ್ನೂ ಓದಿ: ಸಿನಿಮೀಯ ರೀತಿಯಲ್ಲಿ ಸರಗಳ್ಳರನ್ನು ಓಡಿಸಿದ ಸ್ಥಳೀಯ; ಸಿಸಿಟಿವಿಯಲ್ಲಿ ದೃಶ್ಯ ಸೆರೆ