ಹಾವೇರಿ: ಹೋಟೆಲ್ ಮೇಲೆ ವಿಚಕ್ಷಣಾ ದಳ ದಾಳಿ, ₹6 ಲಕ್ಷ ವಶಕ್ಕೆ - ಈಟಿವಿ ಭಾರತ ಕನ್ನಡ
🎬 Watch Now: Feature Video
ಹಾವೇರಿ ಜಿಲ್ಲೆಯ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ಅವರಿಗೆ ಸೇರಿದ ಹೋಟೆಲ್ ಮೇಲೆ ಕಳೆದ ರಾತ್ರಿ ಚುನಾವಣಾ ವಿಚಕ್ಷಣ ದಳ ದಾಳಿ ಮಾಡಿದೆ. ಬಂಕಾಪುರ ಟೋಲ್ ನಾಕಾ ಬಳಿ ಇರುವ ಹೋಟೆಲ್‌ನಲ್ಲಿ ಶೋಧ ನಡೆಸಿದ ಫ್ಲೈಯಿಂಗ್ ಸ್ಕ್ವಾಡ್, ಆರು ಲಕ್ಷ ರೂಪಾಯಿ ವಶಕ್ಕೆ ಪಡೆದಿದ್ದಾರೆ. ಈ ಹಣವನ್ನು ಮತದಾರರಿಗೆ ಹಂಚಲು ಸಂಗ್ರಹಿಸಿಟ್ಟಿದ್ದರು ಎನ್ನಲಾಗಿದೆ. ಒಂದೊಂದು ಕವರ್ನಲ್ಲಿ ಸುಮಾರು 3 ಸಾವಿರ ರೂಪಾಯಿ ಹಾಕಿ ಇಡಲಾಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ.
ಚುನಾವಣಾ ಅಧಿಕಾರಿಗಳು ಬಂಕಾಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಯಾಸೀರ್ ಖಾನ್ ಪಠಾಣ್ ಶಿಗ್ಗಾಂವಿ ಕ್ಷೇತ್ರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಇದಕ್ಕೂ ಮೊದಲು ಕಾಂಗ್ರೆಸ್ ಈ ಕ್ಷೇತ್ರಕ್ಕೆ ಯೂಸೂಫ್ ಸವಣೂರು ಅವರನ್ನು ಆಯ್ಕೆ ಮಾಡಿತ್ತು. ಬಳಿಕ ಸವಣೂರು ಬದಲಿಗೆ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯಾಸೀರ್ ಖಾನ್ ಪಠಾಣ್ ಅವರನ್ನು ಘೋಷಣೆ ಮಾಡಿ ಸಿಎಂ ವಿರುದ್ಧ ಕಣಕ್ಕಿಳಿಸಿದೆ.
ಇದನ್ನೂ ಓದಿ: ಚುನಾವಣಾ ಆಯೋಗದಿಂದ ಕಾಂಗ್ರೆಸ್ ಅಧ್ಯಕ್ಷ ಮತ್ತು ಬಿಜೆಪಿ ರಾಜ್ಯಾಧ್ಯಕ್ಷರಿಗೆ ಷೋಕಾಸ್ ನೋಟಿಸ್