ಚಾರ್ಜಿಂಗ್ ಬಳಿಕ ಸ್ಟಾರ್ಟ್ ಮಾಡುತ್ತಿದ್ದಂತೆ ಹೊತ್ತಿ ಉರಿದ ಎಲೆಕ್ಟ್ರಿಕ್ ಬೈಕ್: ವಿಡಿಯೋ - Electric bike fire in chamarajanagar
🎬 Watch Now: Feature Video
ಚಾಮರಾಜನಗರ: ಚಾರ್ಜ್ ಮಾಡಿ ಮನೆ ಮುಂದೆ ನಿಲ್ಲಿಸಿದ್ದ ಎಲೆಕ್ಟ್ರಿಕ್ ಬೈಕ್ ಸ್ಟಾರ್ಟ್ ಮಾಡಿದ ವೇಳೆ ಏಕಾಏಕಿ ಬೆಂಕಿ ಹೊತ್ತಿಕೊಂಡು ಧಗಧಗನೇ ಹೊತ್ತಿ ಉರಿದ ಘಟನೆ ಚಾಮರಾಜನಗರ ತಾಲೂಕಿನ ಕೊತ್ತಲವಾಡಿ ಗ್ರಾಮದಲ್ಲಿ ಭಾನುವಾರ ನಡೆದಿದೆ. ಕೊತ್ತಲವಾಡಿ ಗ್ರಾಮದ ಬಸವರಾಜಪ್ಪ ಎಂಬುವರಿಗೆ ಸೇರಿದ ಬೈಕ್ ಇದಾಗಿದ್ದು, ಚಾರ್ಜ್ ಆದ ಬಳಿಕ ಬೈಕ್ ಸ್ಟಾರ್ಟ್ ಮಾಡಿದ ವೇಳೆ ಹೊಗೆ ಕಾಣಿಸಿಕೊಂಡಿದೆ ಎಂದು ಅವರು ತಿಳಿಸಿದ್ದಾರೆ.
ಹೊಗೆ ಕಂಡು ಆತಂಕದಿಂದ ಹಿಂದೆ ಸರಿದಿದ್ದು, ಕ್ಷಣಾರ್ಧದಲ್ಲೇ ದಿಢೀರ್ ಬೆಂಕಿಯ ಜ್ವಾಲೆ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಅದೃಷ್ಟವಶಾತ್ ಪಕ್ಕದಲ್ಲೇ ನಿಲ್ಲಿಸಿದ್ದ ಮತ್ತೊಂದು ಬೈಕ್ ಹಾಗೂ ಮನೆಗೆ ಬೆಂಕಿ ವ್ಯಾಪಿಸಿಲ್ಲ. ಕೂಡಲೇ, ಕೆಲ ಯುವಕರು ಸೇರಿ ಉರಿಯುತ್ತಿದ್ದ ಬೈಕ್ಗೆ ನೀರು ಹಾಯಿಸಿ ಬೆಂಕಿ ನಂದಿಸಿದ್ದಾರೆ. ಬೆಳ್ಳಂಬೆಳಗ್ಗೆ ಎಲೆಕ್ಟ್ರಿಕ್ ಬೈಕ್ ಸವಾರನಿಗೆ ದೊಡ್ಡ ಶಾಕ್ ಕೊಟ್ಟಿದೆ.
ಇದನ್ನೂ ಓದಿ: ಏಕಾಏಕಿ ಹೊತ್ತಿ ಉರಿದ ಎಲೆಕ್ಟ್ರಿಕಲ್ ಬೈಕ್.. ವಿಡಿಯೋ
ಮತ್ತೊಂದೆಡೆ ಏಕಾಏಕಿ ಎಲೆಕ್ಟ್ರಿಕ್ ಬೈಕ್ ಹೊತ್ತಿ ಉರಿದ ಘಟನೆ ಇತ್ತೀಚೆಗೆ ಕೋಲಾರದ ಧರ್ಮರಾಯ ನಗರದಲ್ಲಿ ನಡೆದಿತ್ತು. ಹರೀಶ್ ಎಂಬುವರು ಬೈಕ್ನಲ್ಲಿ ಹೋಗುವಾಗ ಬ್ಯಾಟರಿಯಲ್ಲಿ ಇದ್ದಕ್ಕಿದ್ದಂತೆ ಹೊಗೆ ಕಾಣಿಸಿಕೊಂಡಿತ್ತು. ಕ್ಷಣಾರ್ಧದಲ್ಲೇ ಬೆಂಕಿ ವ್ಯಾಪಿಸಿಕೊಂಡು ಹೊತ್ತಿ ಉರಿದಿತ್ತು.