ಕಾಫಿ ತೋಟದಲ್ಲಿ ಬೀಡು ಬಿಟ್ಟ ಕಾಡಾನೆಗಳು: ವಿಡಿಯೋ ವೈರಲ್ - ಈಟಿವಿ ಭಾರತ ಕನ್ನಡ
🎬 Watch Now: Feature Video
ಕೊಡಗು: ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದ ಕಾಡಾನೆಗಳು ಕಾಫಿ ತೋಟದಲ್ಲಿ ಹಿಂಡು ಹಿಂಡಾಗಿ ಬೀಡುಬಿಟ್ಟಿದ್ದು, ಇದರಿಂದ ರೈತರು ಜಮೀನಿಗೆ ತೆರಳಲು ಹಿಂದೇಟು ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಾಫಿ ತೋಟದಲ್ಲಿ ಅಡಗಿರುವ ಕಾಡಾನೆಗಳ ಗುಂಪನ್ನು ಓಡಿಸುವ ಕಾರ್ಯಾಚರಣೆ ನಡೆಯುತ್ತಿದೆ. ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸುತ್ತಮುತ್ತಲಿನ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈಗಾಗಲೇ ಕಾಡಾನೆ ದಾಳಿಗಳಿಂದ ಹಲವಾರು ಜನರು ಪ್ರಾಣ ಕಳೆದುಕೊಂಡಿದ್ದು, ಕೂಡಲೇ ಅವುಗಳನ್ನು ಕಾಡಿಗಟ್ಟಬೇಕು ಎಂದು ರೈತರ ಹಾಗೂ ತೋಟದ ಮಾಲೀಕರು ಸ್ಥಳೀಯರು ಆಗ್ರಹಿಸಿದ್ದಾರೆ.
ರೈತರ ಮತ್ತು ತೋಟದ ಮಾಲೀಕರ ಒತ್ತಡಕ್ಕೆ ಮಣಿದ ಅರಣ್ಯ ಇಲಾಖೆ ಸಿಬ್ಬಂದಿ ಕಾಫಿ ತೋಟದಿಂದ ಕಾಡಿಗೆ ಆನೆಗಳ ಓಡಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ. 30 ಕ್ಕೂ ಹೆಚ್ಚು ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಕಾರ್ಯಾಚರಣೆ ವೇಳೆ ಆನೆಗಳು ಹಿಂಡು ಹಿಂಡಾಗಿ ಕಾಣಿಸಿಕೊಂಡಿದ್ದು, ಸ್ಥಳೀಯರು ಬೆಚ್ಚಿದ್ದಾರೆ. ಅಲ್ಲದೇ ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಆನೆಗಳು ಒಂದು ತೋಟದಿಂದ ಮತ್ತೊಂದು ತೋಟಕ್ಕೆ ಓಡಿರುವುದು ಸೆರೆಯಾಗಿದೆ.
ಇದನ್ನೂ ಓದಿ: ನೀರಿನ ತೊಟ್ಟಿಯಲ್ಲಿ ಸಿಲುಕಿದ್ದ ಕಾಡಾನೆ ಮರಿಯ ರಕ್ಷಣೆ -ವಿಡಿಯೋ