ರುದ್ರಪ್ಪ ಲಮಾಣಿಗೆ ಸಚಿವ ಸ್ಥಾನ ನೀಡುವಂತೆ ಅಭಿಮಾನಿಗಳ ಪ್ರತಿಭಟನೆ: ಸಿದ್ದರಾಮಯ್ಯ ವಿರುದ್ಧ ಆಕ್ರೋಶ - ಬಿಜೆಪಿ ಸರ್ಕಾರವಿದ್ದಾಗ ಕೃಷಿ ಸಚಿವ
🎬 Watch Now: Feature Video
ಹಾವೇರಿ ಶಾಸಕ ಮಾಜಿ ಸಚಿವ ರುದ್ರಪ್ಪ ಲಮಾಣಿಗೆ ಸಚಿವ ಸ್ಥಾನ ನೀಡುವಂತೆ ಅಭಿಮಾನಿಗಳು ಪ್ರತಿಭಟನೆ ನಡೆಸಿದರು. ರುದ್ರಪ್ಪ ಲಮಾಣಿ ಮನೆ ಎದುರು ಸೇರಿದ ಅಭಿಮಾನಿಗಳು, ರುದ್ರಪ್ಪ ಲಮಾಣಿ ಈ ಹಿಂದೆ ಜವಳಿ ಖಾತೆ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ಹಲವು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು ಅನುಭವಿಯಾಗಿದ್ದಾರೆ. ರುದ್ರಪ್ಪ ಲಮಾಣಿ ಬಂಜಾರ ಸಮಾಜದ ಏಕೈಕ ಶಾಸಕರಾಗಿದ್ದಾರೆ. ಹೀಗಾಗಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಅಭಿಮಾನಿಗಳು ಒತ್ತಾಯಿಸಿದರು.
ಹಾವೇರಿ ಜಿಲ್ಲೆ ಈ ಹಿಂದೆ ಬಿಜೆಪಿ ಭದ್ರಕೋಟೆಯಾಗಿತ್ತು. ಆದರೆ,ಈ ಬಾರಿ ಹಾವೇರಿ ಜಿಲ್ಲೆಯ ಐದು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಹಿಂದೆ ಬಿಜೆಪಿ ಸರ್ಕಾರವಿದ್ದಾಗ ಕೃಷಿ ಸಚಿವ ಮತ್ತು ಹಾವೇರಿ ಜಿಲ್ಲೆಯವರೇ ಸಿಎಂ ಆಗಿದ್ದರು. ಮಾಜಿ ಸಿಎಂ ಇರುವ ಜಿಲ್ಲೆಯಲ್ಲಿ ಒಂದು ಸಚಿವ ಸ್ಥಾನ ನೀಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಸರ್ಕಾರ ಬಂದಾಗಲೆಲ್ಲ ಹಾವೇರಿ ನಿರ್ಲಕ್ಷ್ಯಕ್ಜೆ ಒಳಗಾಗುತ್ತಿದೆ ಎಂಬ ಆರೋಪವಿದೆ. ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ಹಾವೇರಿ ಯಾವ ಶಾಸಕರಿಗೆ ಸಚಿವ ಸ್ಥಾನ ಸಿಕ್ಕಿಲ್ಲ. ಸಿದ್ದರಾಮಯ್ಯ ಹಾವೇರಿ ಜಿಲ್ಲೆಯನ್ನು ಈ ಬಾರಿ ಸಂಪೂರ್ಣ ನಿರ್ಲಕ್ಷಿಸಿದ್ದಾರೆ. ಕೊನೆಯ ಪಕ್ಷ ರುದ್ರಪ್ಪ ಲಮಾಣಿಗೆ ಸಚಿವ ಸ್ಥಾನ ನೀಡಬೇಕಿತ್ತು. ಎರಡನೇಯ ಬಾರಿ ಸಿಎಂ ಆಗಿರುವ ಸಿದ್ದರಾಮಯ್ಯ ಜಿಲ್ಲೆಯ ಶಾಸಕರಿಗೆ ಸಚಿವ ಸ್ಥಾನ ನೀಡಬೇಕು ಎಂದು ಅಭಿಮಾನಿಗಳು ಆಗ್ರಹಿಸಿದರು.
ಇದನ್ನೂಓದಿ:ಪುಟ್ಟರಂಗಶೆಟ್ಟಿಗೆ ತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ, ಅಭಿಮಾನಿಯಿಂದ ಸೂಸೈಡ್ ಪತ್ರ