ದನ ಮೇಯಿಸಲು ಹೋಗಿದ್ದ ರೈತ ಕಾಡಾನೆ ದಾಳಿಗೆ ಬಲಿ - ಬನ್ನೇರುಘಟ್ಟ ಪೊಲೀಸ್ ಠಾಣೆ
🎬 Watch Now: Feature Video
ದನ ಮೇಯಿಸಲು ಕಾಡಿಗೆ ಹೋಗಿದ್ದ ರೈತನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ರೈತ ವೃತಪಟ್ಟಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಸೊಳ್ಳೆಪುರ ದೊಡ್ಡಿ ಗ್ರಾಮದ ಬಳಿ ಸಂಭವಿಸಿದೆ. ಸೊಳ್ಳೆಪುರ ದೊಡ್ಡಿ ನಿವಾಸಿ ಅಲಗಪ್ಪ( 50) ಮೃತನಾದ ರೈತ. ನಿತ್ಯ ದನಗಳನ್ನು ಮೇಯಿಸಲು ಕಾಡಿಗೆ ಹಲಗಪ್ಪ ಹೋಗುತ್ತಿದ್ದರು. ಮೂರು ದಿನದ ಹಿಂದೆ ಅವರು ಎಂದಿನಂತೆ ದನ ಮೇಯಿಸಲು ಹೋಗಿದ್ದರು. ಆದರೆ ತಾನು ಸಾಕಿದ್ದ ಹಸು ತಪ್ಪಿಸಿಕೊಂಡಿದ್ದರಿಂದ ಕಾಡಿನಲ್ಲಿ ಹುಡುಕಲೂ ಹೋಗಿದ್ದವನು, ಮನೆಗೆ ವಾಪಸ್ ಬಂದಿರಲಿಲ್ಲ.
ಎರಡು ದಿನಗಳಿಂದ ಕುಟುಂಬದವರು ಹುಡುಕಾಟ ನಡೆಸಿದರೂ ಅಲಗಪ್ಪ ಯಾರ ಸಂಪರ್ಕಕ್ಕೂ ಸಿಕ್ಕಿರಲಿಲ್ಲ. ಬುಧವಾರ ಕಾಡಿನಲ್ಲಿ ಹಾರೋಹಲ್ಲಿ ಬೀಟ್ ಗುಲ್ಲೆಟ್ಟಿ ಕಾವಲ್ ಬಳಿ ರೈತನ ಮೃತದೇಹ ಅರಣ್ಯ ಇಲಾಖೆ ಸಿಬ್ಬಂದಿಗೆ ಪತ್ತೆಯಾಗಿದೆ. ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂಓದಿ:ರಸ್ತೆ ಅಪಘಾತ: ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಲಕ್ಷ್ಮಣ ಸವದಿ