ಕೋಲಾರ: ಹಸು ಕೋಳಿಗಳ ಸಮೇತ ಭೂಸ್ವಾಧೀನಾಧಿಕಾರಿಗಳ ಕಚೇರಿ ಎದುರು ಪ್ರತಿಭಟಿಸಿದ ರೈತರು - ಎಕ್ಸ್‌ಪ್ರೆಸ್ ಕಾರಿಡಾರ್ ಕಾಮಗಾರಿ
🎬 Watch Now: Feature Video
ಕೋಲಾರ : ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ಕಾರಿಡಾರ್ ಕಾಮಗಾರಿ ಈಗಾಗಲೇ ಬರದಿಂದ ಸಾಗುತ್ತಿದ್ದು, ರೈತರಿಗೆ ಸಮರ್ಪಕವಾದ ಪರಿಹಾರ ಸಿಗುತ್ತಿಲ್ಲ. ಹೀಗಾಗಿ, ಕೋಲಾರ ವಿಶೇಷ ಭೂಸ್ವಾಧೀನ ಅಧಿಕಾರಿ ಕಚೇರಿಯ ಮುಂದೆ ರೈತರು ಪ್ರತಿಭಟನೆ ನಡೆಸಿದ್ರು. ಹಸು ಕೋಳಿಗಳ ಸಮೇತ ಭೂಮಿ ಕಳೆದುಕೊಂಡ ರೈತರು ಭೂಸ್ವಾಧೀನಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ್ರು.
11 ಮಂದಿ ರೈತರ 6.80 ಕೋಟಿ ಪರಿಹಾರಧನ ಅಧಿಕಾರಿಯ ಅಕೌಂಟ್ನಲ್ಲಿದೆ. ಆದ್ರೆ ರೈತರಿಗೆ ಮಾತ್ರ ಬಿಡುಗಡೆ ಮಾಡುತ್ತಿಲ್ಲ. ಉದ್ದೇಶ ಪೂರ್ವಕವಾಗಿ ರೈತರನ್ನ ಅಧಿಕಾರಿಗಳು ಸತಾಯಿಸುತ್ತಿದ್ದಾರೆ ಎಂದು ಆರೋಪಿಸಿದ್ರು. ಚೆನ್ನೈ ಹಾಗೂ ಬೆಂಗಳೂರು ಮಧ್ಯೆ ಕಾಮಗಾರಿಗೆ ಈಗಾಗಲೇ ಭೂಸ್ವಾಧೀನವಾಗಿದ್ದು, ಪರಿಹಾರ ನೀಡದೆ ಭೂಮಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ರೈತರು ಆರೋಪಿಸಿದರು.
ಕೇಂದ್ರದ ಕೈಗಾರಿಕಾ ಉದ್ದೇಶಕ್ಕಾಗಿ ಬೆಂಗಳೂರು ಹಾಗೂ ಚೆನ್ನೈ ಮಧ್ಯೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಯೋಜನೆ ಇದಾಗಿದೆ. ಕೋಲಾರದ ಮಾಲೂರು, ಬಂಗಾರಪೇಟೆ, ಕೆಜಿಎಫ್ ಮತ್ತು ಮುಳಬಾಗಿಲು ತಾಲೂಕುಗಳಲ್ಲಿ ಹಾದು ಹೋಗಿರುವ ಎಕ್ಸ್‌ಪ್ರೆಸ್ ಕಾರಿಡಾರ್ ಕಾಮಗಾರಿ ಇನ್ನೇನು ಮಗಿಯುವ ಹಂತ ತಲುಪಿದೆ. ಆದ್ರೆ ಪಿ ನಂಬರ್ ದುರಸ್ತಿ ಸೇರಿದಂತೆ ಹಲವು ಸಬೂಬು ಹೇಳಿ ಲಕ್ಷಾಂತರ ರೂಪಾಯಿ ಹಣ ಲೂಟಿ ಮಾಡಲಾಗುತ್ತಿದೆ ಅನ್ನೋದು ರೈತರ ಆರೋಪವಾಗಿದೆ. ಅಲ್ಲದೆ ಇಂದು ಕೋಳಿ, ಹಸುಗಳ ಸಮೇತ ಶೀಘ್ರವಾಗಿ ಪರಿಹಾರ ನೀಡುವಂತೆ ಭೂಮಿ ಕಳೆದುಕೊಂಡ ರೈತರು ಪ್ರತಿಭಟನೆ ಮಾಡುವ ಮೂಲಕ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ: ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದ ಕೆಐಎಡಿಬಿ ವಿಶೇಷ ಭೂಸ್ವಾಧೀನಾಧಿಕಾರಿ