ವರುಣದಲ್ಲಿ ಸಿದ್ದರಾಮಯ್ಯ vs ಸೋಮಣ್ಣ: ಗದ್ದುಗೆ ಗುದ್ದಾಟದಲ್ಲಿ ಗೆಲುವು ಯಾರಿಗೆ? - fight between Siddaramaih and Somanna

🎬 Watch Now: Feature Video

thumbnail

By

Published : Apr 20, 2023, 5:12 PM IST

ರಾಜ್ಯ ವಿಧಾನಸಭೆ ಚುನಾವಣೆಗೆ ದಿನ ಸಮೀಪಿಸುತ್ತಿದೆ. ಚುನಾವಣಾ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ವರುಣ ಕ್ಷೇತ್ರ ರಾಜ್ಯ ರಾಜಕಾರಣದಲ್ಲಿ ಹೆಚ್ಚು ಗಮನ ಸೆಳೆದಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದು ನಿನ್ನೆಯಷ್ಟೇ ನಾಮಪತ್ರ ಸಲ್ಲಿಸಿದ್ದಾರೆ. ಬೃಹತ್​ ರೋಡ್​ ಶೋ ನಡೆಸಿ ಶಕ್ತಿ ಪ್ರದರ್ಶನ ಮಾಡಿದ ಅವರು ಗೆಲುವು ಸಾಧಿಸುವ ವಿಶ್ವಾಸದಲ್ಲಿದ್ದಾರೆ. ಬಿಜೆಪಿಯಿಂದ ವಸತಿ ಸಚಿವ ವಿ.ಸೋಮಣ್ಣ ಅಖಾಡಕ್ಕಿಳಿದಿರುವುದು ಕ್ಷೇತ್ರದಲ್ಲಿ ಪೈಪೋಟಿ ಹೆಚ್ಚಿಸಿದೆ. ಇವರಿಬ್ಬರಿಗೆ ಟಕ್ಕರ್ ಕೊಡಲು ಜೆಡಿಎಸ್​ ಅಭ್ಯರ್ಥಿ ಡಾ. ಭಾರತಿ ಶಂಕರ್​ ಸಜ್ಜಾಗಿದ್ದಾರೆ.

ಕಳೆದ ಬಾರಿ ಬಾದಾಮಿಯಿಂದ ಗೆದ್ದಿದ್ದ ಸಿದ್ದರಾಮಯ್ಯ ಈ ಸಲ ಎರಡು ಕ್ಷೇತ್ರಗಳಿಂದ ಸ್ಪರ್ಧಿಸಲು ಒಲವು ತೋರಿಸಿದ್ದರು. ವರುಣ ಜೊತೆಗೆ ಕೋಲಾರ ಕ್ಷೇತ್ರದಲ್ಲೂ ಸ್ಪರ್ಧಿಸಲು ನಿರ್ಧರಿಸಿದ್ದರು. ಆದರೆ ಅಂತಿಮವಾಗಿ ಹೈಕಮಾಂಡ್​ ಸೂಚನೆಯಂತೆ ವರುಣ ಕ್ಷೇತ್ರದಿಂದ ಮಾತ್ರ ಸಿದ್ದರಾಮಯ್ಯ ಸ್ಫರ್ಧೆ ಮಾಡುತ್ತಿದ್ದಾರೆ. ಹಾಲಿ ಶಾಸಕ ಯತೀಂದ್ರ ಸಿದ್ದರಾಮಯ್ಯ ತಮ್ಮ ತಂದೆಗಾಗಿ ಕ್ಷೇತ್ರ ತ್ಯಾಗ ಮಾಡಿದ್ದಾರೆ.

ಜಾತಿವಾರು ಲೆಕ್ಕಾಚಾರದಿಂದ ನೋಡುವುದಾದರೆ, ವರುಣ ಕ್ಷೇತ್ರದಲ್ಲಿ ಲಿಂಗಾಯತರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಎಸ್​ಸಿ ಮತ್ತು ಕುರುಬ ಸಮುದಾಯದವರು ನಿರ್ಣಾಯಕರು. ಮತದಾರ ಪ್ರಭುಗಳು ಈ ಬಾರಿ ಯಾರ ಕೈ ಹಿಡಿಯಲಿದ್ದಾರೆ ಎಂಬುದು ಕುತೂಹಲ.

ಇದನ್ನೂ ಓದಿ: ಕನಕಪುರದಲ್ಲಿ ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಕೆ: ಅಚ್ಚರಿಗೆ ಕಾರಣವಾದ ಕಾಂಗ್ರೆಸ್‌ ನಡೆ

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.