Watch.. ಸಂಸದೆ ಸುಮಲತಾ ಅಂಬರೀಶ್ ವೇದಿಕೆ ಹತ್ತುವ ವಿಚಾರ: ಎರಡು ಗುಂಪುಗಳ ನಡುವೆ ವಾಗ್ವಾದ - ಈಟಿವಿ ಭಾರತ ಕನ್ನಡ
🎬 Watch Now: Feature Video
ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ ಅವರು ಕಾರ್ಯಕ್ರಮದ ವೇದಿಕೆ ಹತ್ತುವ ವಿಚಾರಕ್ಕೆ ಗ್ರಾಮಸ್ಥರು ಕೈ ಕೈ ಮಿಲಾಯಿಸಿರುವ ಘಟನೆ ಬಿ.ಗೌಡಗೆರೆ ಗ್ರಾಮದ ಮಹದೇಶ್ವರ ದೇವಾಲಯ ಉದ್ಘಾಟನಾ ಕಾರ್ಯಕ್ರಮದಲ್ಲಿ ನಡೆದಿದೆ. ಮಂಡ್ಯ ತಾಲೂಕಿನ ಬಿ.ಗೌಡಗೆರೆ ಗ್ರಾಮದಲ್ಲಿ ದೇವಾಲಯ ಲೋಕಾರ್ಪಣೆ ಹಿನ್ನೆಲೆ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ವೇದಿಕೆ ನಿರ್ಮಾಣ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ರಾಜಕೀಯ ಮುಖಂಡರನ್ನು ವೇದಿಕೆಗೆ ಹತ್ತಿಸಬಾರದೆಂದು ಮೊದಲು ತೀರ್ಮಾನ ಕೈಗೊಳ್ಳಲಾಗಿತ್ತು. ಆದರೆ ಕಾರ್ಯಕ್ರಮದ ವೇದಿಕೆಗೆ ಸಂಸದೆ ಸುಮಲತಾರನ್ನು ಕರೆತಂದಿದ್ದಕ್ಕೆ ಕೆಲವರು ಅಸಮಾಧಾನ ವ್ಯಕ್ತಪಡಿಸಿದರು.
ಈ ವೇಳೆ, ಸುಮಲತಾ ಬೆಂಬಲಿಗರು ಹಾಗೂ ಮತ್ತೊಂದು ಬಣದ ನಡುವೆ ವಾಗ್ವಾದ ನಡೆದಿದೆ. ಎರಡು ಗುಂಪುಗಳ ವಾಗ್ವಾದದ ನಡುವೆಯೂ ಸುಮಲತಾರನ್ನು ವೇದಿಕೆಗೆ ಕರೆದೊಯ್ಯಲಾಯಿತು. ಗಲಾಟೆ ಮಾಡಿದವರ ವಿರುದ್ಧ ಸಂಸದೆ ಸುಮಲತಾ ಅಂಬರೀಶ್ ಅಸಮಾಧಾನ ವ್ಯಕ್ತಪಡಿಸಿದರು.
ಇದನ್ನೂ ಓದಿ : ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ: ನೃತ್ಯ ಮಾಡಿ ಪ್ರೇಕ್ಷಕರನ್ನು ರಂಜಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ