ಹಾವೇರಿ: ಕ್ಯಾಂಡಲ್​ ತಯಾರಿಕಾ ಘಟಕದಲ್ಲಿ ಬೆಂಕಿ ಅವಘಡ.. ಐವರಿಗೆ ಗಾಯ - ಸ್ಪಾರ್ಕ್ ಕ್ಯಾಂಡಲ್ ತಯಾರಿಕಾ ಘಟಕ

🎬 Watch Now: Feature Video

thumbnail

By

Published : Aug 1, 2023, 5:58 PM IST

ಹಾವೇರಿ : ಕ್ಯಾಂಡಲ್​ ತಯಾರಿಕಾ ಘಟಕದಲ್ಲಿ ಆಕಸ್ಮಿಕ ಅಗ್ನಿ ಅವಘಡ ಉಂಟಾಗಿ ಐವರು ಗಾಯಗೊಂಡಿರುವ ಘಟನೆ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ನಡೆದಿದೆ. ರಾಣೆಬೆನ್ನೂರಿನ ಮಾರುತಿ ನಗರದಲ್ಲಿರುವ ಸ್ಪಾರ್ಕ್ ಕ್ಯಾಂಡಲ್ ತಯಾರಿಕಾ ಘಟಕದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಈ ವೇಳೆ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ದಾವಣಗೆರೆ ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ : ಫೋಮ್ ಫ್ಯಾಕ್ಟರಿಯಲ್ಲಿ ಭಾರಿ ಅಗ್ನಿ ಅವಘಡ: ನಾಲ್ವರು ಕಾರ್ಮಿಕರು ಸಾವು, 6 ಮಂದಿಯ ಸ್ಥಿತಿ ಗಂಭೀರ

ಶ್ರೀಕಾಂತ್​ ಎಂಬುವವರಿಗೆ ಸೇರಿದ ಸ್ಪಾರ್ಕ್​ ಕ್ಯಾಂಡಲ್ ಕಂಪನಿಯ ತಯಾರಿಕಾ ಘಟಕಕ್ಕೆ ಬೆಂಕಿ ಬಿದ್ದಿದೆ. ಅವಘಡದಲ್ಲಿ ಕ್ಯಾಂಡಲ್​ಗಳು ನಾಶವಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ ಎಂದು ತಿಳಿದುಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ. ಈ ವೇಳೆ ಸ್ಥಳದಲ್ಲಿ ನೂರಾರು ಜನರು ಜಮಾಯಿಸಿದ್ದರು. ರಾಣೆಬೆನ್ನೂರು ಶಹರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ : ರಾತ್ರಿ ಮಲಗಿದ್ದ ವೇಳೆ ಎರಗಿದ ಜವರಾಯ, ಮನೆಗೆ ಬೆಂಕಿ ಬಿದ್ದು ಒಂದೇ ಕುಟುಂಬದ 6 ಮಂದಿ ಬಲಿ

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.