ಬೆಂಗಳೂರಿನ ಜಿಟಿ ಗ್ಯಾರೇಜ್ ಟೆಕ್ನಲ್ಲಿ ಅಗ್ನಿ ಅವಘಡ: 10ಕ್ಕೂ ಅಧಿಕ ಕಾರುಗಳು ಸುಟ್ಟು ಭಸ್ಮ - ಈಟಿವಿ ಭಾರತ ಕನ್ನಡ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/640-480-17766443-thumbnail-4x3-tha.jpg)
ಬೆಂಗಳೂರು: ರಾಮಮೂರ್ತಿ ನಗರದ ಪೊಲೀಸ್ ಠಾಣಾ ವ್ಯಾಪ್ತಿಯ ಗ್ಯಾರೇಜ್ವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿ ಅನಾಹುತದಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಕಾರುಗಳು ಬೆಂಕಿಗಾಹುತಿಯಾಗಿವೆ. 10ಕ್ಕೂ ಅಧಿಕ ಕಾರುಗಳು ಸುಟ್ಟು ಕರಕಲಾಗಿವೆ.
ಚಾಂದ್ ಪಾಷ, ತಬೇರೇಸ್ ಪಾಷ ಎಂಬವರಿಗೆ ಸೇರಿದ ಜಿಟಿ ಗ್ಯಾರೇಜ್ ಟೆಕ್ನಲ್ಲಿ ಬುಧವಾರ ಸಂಜೆ 7 ಗಂಟೆ ಸುಮಾರಿಗೆ ಗ್ಯಾರೇಜ್ನ ಸ್ಪಾಟರ್ನಲ್ಲಿ ಕೆಲಸ ಮಾಡುವಾಗ ಬೆಂಕಿ ಕಿಡಿ ಹಾರಿ ಹೊತ್ತಿಕೊಂಡ ಶಂಕೆ ವ್ಯಕ್ತವಾಗಿದೆ. ಮಾಹಿತಿ ಆಧರಿಸಿ ಸ್ಥಳಕ್ಕೆ ಐದಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ: ಶ್ರೀರಂಗಪಟ್ಟಣದ ಕರಿಘಟ್ಟ ಅರಣ್ಯ ಪ್ರದೇಶಕ್ಕೆ ಬೆಂಕಿ