ಪೊಲೀಸ್ ಠಾಣೆ ಆವರಣದಲ್ಲಿ ಅಗ್ನಿ ಅವಘಡ: 61 ವಾಹನಗಳಿಗೆ ಹಾನಿ - ETV Bharat kannada News

🎬 Watch Now: Feature Video

thumbnail

By

Published : Apr 13, 2023, 8:33 PM IST

ಹೊಸಕೋಟೆ (ಬೆಂಗಳೂರು ಗ್ರಾ) : ತಾಲೂಕಿನ ಆವಲಹಳ್ಳಿ ಪೊಲೀಸ್ ಠಾಣೆಯ ಆವರಣದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಅನೇಕ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ ವಾಹನಗಳು ಹಾನಿಗೊಂಡಿವೆ. ಇಂದು ಮಧ್ಯಾಹ್ನ ಠಾಣೆಯ ಆವರಣದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಕಾಂಪೌಂಡ್​ನಲ್ಲಿ ನಿಲ್ಲಿಸಿದ್ದ ವಾಹನಗಳು ಸುಟ್ಟು ಕರಕಲಾಗಿವೆ. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದರು. ಘಟನಾ ಸ್ಥಳಕ್ಕೆ ಕೇಂದ್ರ ವಲಯ ಐಜಿಪಿ ರವಿಕಾಂತೇಗೌಡ, ಬೆಂಗಳೂರು ಗ್ರಾಮಾಂತರ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ಮಾತನಾಡಿದ ಐಜಿಪಿ ರವಿಕಾಂತೇಗೌಡ, ಘಟನೆಯಲ್ಲಿ ಹಲವು ಪ್ರಕರಣದಲ್ಲಿ ವಶಪಡಿಸಿಕೊಂಡಿದ್ದ 8 ಕಾರುಗಳು, 8 ಆಟೋ, 45 ದ್ವಿಚಕ್ರವಾಹನಗಳು ಸುಟ್ಟು ಕರಕಲಾಗಿವೆ. ಆದರೆ ಠಾಣೆಯಲ್ಲಿನ ಯಾವುದೇ ಸ್ವತ್ತು ಮತ್ತು ದಾಖಲೆಗಳಿಗೆ ಹಾನಿಯಾಗಿಲ್ಲ. ಪೊಲೀಸ್​ ಠಾಣೆ ಆವರಣದಲ್ಲಿ ಬೆಂಕಿ ಕಾಣಿಸಿಕೊಳ್ಳಲು ಕಾರಣವೇನು ಎಂಬುದನ್ನು ತಿಳಿಯಲು ಈಗಾಗಲೇ ತನಿಖೆಗೆ ಆದೇಶಿಸಲಾಗಿದೆ. ಪ್ರಕರಣ ಕೂಡ ದಾಖಲಿಸಲಾಗಿದೆ ಎಂದು ಹೇಳಿದರು.   

ಇದನ್ನೂ ಓದಿ : ಮೂರು ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ.. ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.