Fire at Hospital: ಅಹಮದಾಬಾದ್ ಆಸ್ಪತ್ರೆಯ ನೆಲಮಾಳಿಗೆಯಲ್ಲಿ ಬೆಂಕಿ; 100 ರೋಗಿಗಳ ಸ್ಥಳಾಂತರ - ಖಾಸಗಿ ಆಸ್ಪತ್ರೆಯ ನೆಲಮಾಳಿಗೆಯಲ್ಲಿ ಬೆಂಕಿ
🎬 Watch Now: Feature Video
ಅಹಮದಾಬಾದ್ (ಗುಜರಾತ್) : ಇಲ್ಲಿನ ಖಾಸಗಿ ಆಸ್ಪತ್ರೆಯ ನೆಲಮಾಳಿಗೆಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 100 ರೋಗಿಗಳನ್ನು ತಕ್ಷಣ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಅಗ್ನಿ ನಂದಿಸುವ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಹಮದಾಬಾದ್ ನಗರದ ಬಹುಮಹಡಿ ರಾಜಸ್ಥಾನ ಆಸ್ಪತ್ರೆಯ ನೆಲಮಾಳಿಗೆಯಲ್ಲಿ ಇಂದು (ಭಾನುವಾರ) ಬೆಳಗಿನ ಜಾವ 4:30ರ ಸುಮಾರಿಗೆ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ದಟ್ಟ ಹೊಗೆ ಆವರಿಸಿಕೊಂಡ ತಕ್ಷಣ ಸಿಬ್ಬಂದಿ ಅಗ್ನಿಶಾಮಕ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಫೈರಿಂಗ್ ಎಂಜಿನ್‌ಸಮೇತ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುತ್ತಿದ್ದಾರೆ.
ನೆಲಮಾಳಿಗೆಯಲ್ಲಿ ಬೆಂಕಿ ಅನಾಹುತ ಉಂಟಾಗಿರುವ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳನ್ನು ಬೇರೆಡೆ ಸ್ಥಳಾಂತರಿಸಲಾಗಿದೆ. ಹೊಗೆ ಹೊರಹೊಮ್ಮುತ್ತಿದೆ. ಬೆಂಕಿ ಅನಾಹುತಕ್ಕೆ ಕಾರಣ ತಿಳಿದುಬಂದಿಲ್ಲ. ಇದುವರೆಗೆ ಯಾವುದೇ ಗಾಯ, ಪ್ರಾಣಹಾನಿಯಾದ ಬಗ್ಗೆ ವರದಿಯಾಗಿಲ್ಲ. ತಕ್ಷಣದ ತೆರವು ಕಾರ್ಯಾಚರಣೆ ನಡೆಸಿ ಪ್ರಾಣಹಾನಿ ತಪ್ಪಿಸಲಾಗಿದೆ. ಆಸ್ಪತ್ರೆಯನ್ನು ಚಾರಿಟಬಲ್ ಟ್ರಸ್ಟ್ ನಡೆಸುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: Mandya Accident: ಮಂಡ್ಯದಲ್ಲಿ ನಾಲೆಗೆ ಉರುಳಿದ ಕಾರು; ಬಾಲಕಿ ಸೇರಿ ನಾಲ್ವರು ಸಾವು