ಸಿಲಿಂಡರ್ ಸ್ಪೋಟಗೊಂಡು ಮನೆಗೆ ಬೆಂಕಿ : ನಾಲ್ಕು ಮಕ್ಕಳ ಸಾವು, ನಾಲ್ವರಿಗೆ ಗಂಭೀರ ಗಾಯ - Etv Bharat Kannada
🎬 Watch Now: Feature Video
ವಿಕಾಸನಗರ (ಉತ್ತರಾಖಂಡ): ಡೆಹ್ರಾಡೂನ್ ಜಿಲ್ಲೆಯ ತುನಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಮನೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿ ನಾಲ್ವರು ಮಕ್ಕಳು ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಸ್ಥಳೀಯರು ಹೇಳುವ ಪ್ರಕಾರ ಗುರುವಾರ ಸಂಜೆ ಸುಮಾರಿಗೆ ಮನೆಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ವಿಷಯವನ್ನು ಪೊಲೀಸರಿಗೆ ತಿಳಿಸಿದ್ದೇವೆ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದೆ ಎಂದು ತಿಳಿಸಿದ್ದಾರೆ.
ನವದೆಹಲಿ: ದೆಹಲಿಯ ಸಮಲ್ಖಾ ಕಪಶೇರಾ ಪ್ರದೇಶದ ಸೋನಿಯಾ ಗಾಂಧಿ ಕ್ಯಾಂಪ್‌ನಲ್ಲಿರುವ ಸೌದೆ ಗೊಡಾನ್ನಲ್ಲಿ ಬೆಂಕಿ ಅವಘಡ ಸಂಭವಿಸಿದೆ ಸುಮಾರು 16ಕ್ಕೂ ಹೆಚ್ಚು ಅಗ್ನಿಶಾಮಕ ದಳ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿರುವುದಾಗಿ, ಅಗ್ನಿಶಾಮಕ ಇಲಾಖೆಯ ವಿಭಾಗೀಯ ಅಧಿಕಾರಿ ಸತ್ಪಾಲ್ ಭಾರದ್ವಾಜ್ ತಿಳಿಸಿದ್ದಾರೆ. "ಇದು ಸೌದೆ ಗೋಡಾನ್ ಆಗಿತ್ತು. ಇಂದು ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ ಪ್ರಾಣಹಾನಿ ಸಂಭವಿಸಿರುವ ಬಗ್ಗೆ ಯಾವುದೇ ವರದಿಯಾಗಿಲ್ಲ. ಬೆಂಕಿ ಅವಘಡಕ್ಕೆ ಸೂಕ್ತ ಕಾರಣ ತಿಳಿದು ಬಂದಿಲ್ಲ ಎಂದು ಅವರು ಹೇಳಿದರು.
ಇದನ್ನೂ ಓದಿ: ಹೈ ಟೆನ್ಷನ್ ವಿದ್ಯುತ್ ತಂತಿ ಬಿದ್ದು ಹೊತ್ತಿ ಉರಿದ ಕಾರ್ಖಾನೆ.. ನೆಲಮಂಗಲದಲ್ಲಿ ಅವಘಡ